ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ಬಂಧನ
ಚಿಕ್ಕಬಳ್ಳಾಪುರ, ಏ.22- ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನಾರಾಯಣದಾಸರಹಳ್ಳಿ ಸಮೀಪ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿ ಸುಮಾರು 1.10 ಲಕ್ಷ ಮೌಲ್ಯದ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಚೀಮಂಗಲ ಗ್ರಾಮದ ನಿವಾಸಿ ಮುನಿಶಾಮಪ್ಪ ಬಂಧಿತ ಆರೋಪಿಯಾಗಿದ್ದು, ನಾರಾಯಣದಾಸರಹಳ್ಳಿ ಕಡೆಯಿಂದ ಗಾಂಜಾ ತುಂಬಿದ ಚೀಲ ತರುತ್ತಿರುವ ಖಚಿತ ಮಾಹಿತಿ ಮೇರೆಗೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪಿಎಸ್ಐ ಪ್ರದೀಪ್ ಪೂಜಾರಿ ಹಾಗೂ ತಹಸೀಲ್ದಾರ್ ಅಜಿತ್ಕುಮಾರ್ ರೈ ನೇತೃತ್ವದದಲ್ಲಿ ಕಾರ್ಯಾಚರಣೆ ನಡೆಸಿ ಗಾಂಜಾ ಜೊತೆಗೆ ಆರೋಪಿಯನ್ನು ಬಂಧಿಸಿದ್ದಾರೆ.
ಸುಮಾರು 1.4 ಕೆಜಿ ತೂಕದ ಸುಮಾರು 1.10 ಲಕ್ಷ ಮೌಲ್ಯದ ಗಾಂಜಾ ಮತ್ತು ತಕ್ಕಡಿ ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಸಿಬ್ಬಂದಿಯಾದ ಸಂತೋಷ್, ಇನಾಯತ್, ವೆಂಕಟರಮಣಪ್ಪ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS