ಗುಣಮಟ್ಟದ ಶಿಕ್ಷಣದಿಂದ ಉತ್ತಮ ಸಮಾಜ

ಈ ಸುದ್ದಿಯನ್ನು ಶೇರ್ ಮಾಡಿ

devanahalli-0

ದೇವನಹಳ್ಳಿ, ಆ.17- ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡುವುದರಿಂದ ಸಮಾಜದಲ್ಲಿ ಉತ್ತಮ ಬದಲಾವಣೆ ಕಾಣಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಕುರಿ ಮತ್ತು ಉಣ್ಣೆ ಸಹಕಾರ ಸಂಘದ ಮಾಜಿ ಅಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ ತಿಳಿಸಿದರು.ತಾಲೂಕಿನ ಸುಣ್ಣಘಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಸುರಕ್ಷತಾ ಠೇವಣಿ ನಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಲಾ ಮಕ್ಕಳಿಗೆ ಯಾವುದೇ ರೀತಿಯ ಸುರಕ್ಷತೆ ಇಲ್ಲದ ಕಾರಣ ಅವರಿಗಾಗಿ ವಿದ್ಯಾರ್ಥಿ ಸುರಕ್ಷತಾ ನಿಧಿಯನ್ನು ಠೇವಣಿ ಮಾಡಿ ಅವರ ಆರೋಗ್ಯ, ವಿದ್ಯಾಭ್ಯಾಸಕ್ಕಾಗಿ ಮೀಸಲು ಮಾಡಲಾಗಿದೆ ಎಂದು ಹೇಳಿದರು.
ಗ್ರಾಪಂ ಉಪಾಧ್ಯಕ್ಷೆ ಪಿಳ್ಳಮ್ಮ ಸಿದ್ಧರಾಮಯ್ಯ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಹೆಚ್ಚಿನ ಶಿಕ್ಷಣವನ್ನು ಕೊಡಿಸಲಾಗುತ್ತದೆ. ಶಾಲಾ ಹಂತದಲ್ಲೇ ಮಕ್ಕಳು ಯೋಗಾಸನ, ಕ್ರೀಡೆ ಅಳವಡಿಸಿಕೊಂಡರೆ ಉತ್ತಮ ಆರೋಗ್ಯ ಹೆಚ್ಚಿಸಿಕೊಳ್ಳಬಹುದು. ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವ ಕೆಲಸವಾಗಬೇಕು ಎಂದು ಕಿವಿಮಾತು ಹೇಳಿದರು.
ಎಸ್‍ಡಿಎಂಸಿ ಅಧ್ಯಕ್ಷ ಹನುಮಂತೇಗೌಡ, ಹೋಬಳಿ ಕುರುಬರ ಸಂಘದ ಅಧ್ಯಕ್ಷ ಮಂಜುನಾಥ್, ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಮೂರ್ತಿ ಮುಖ್ಯ ಶಿಕ್ಷಕ ಮರಿಯಪ್ಪ, ಗ್ರಾಪಂ ಸದಸ್ಯ ರಾಮಣ್ಣ, ಗೌರಮ್ಮ, ಮತ್ತಿತರರು ಇದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin