ಗೃಹ ನಿರ್ಮಾಣ ಸಹಕಾರ ಸಂಘಕ್ಕೆ 2.45 ಲಕ್ಷ ಲಾಭ

ಈ ಸುದ್ದಿಯನ್ನು ಶೇರ್ ಮಾಡಿ

chikkamangaluru

ಚಿಕ್ಕಮಗಳೂರು, ಸೆ.26- ನಗರ ಗೃಹನಿರ್ಮಾಣ ಸಹಕಾರ ಸಂಘ ಪ್ರಸಕ್ತ ಸಾಲಿನಲ್ಲಿ 2.45 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸಿ.ಎಸ್.ಕುಬೇರ ಹೇಳಿದರು.ನಗರದಲ್ಲಿ ನಡೆದ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು, ಈ ಹಣದಲ್ಲಿ ಸದಸ್ಯರಿಗೆ ಶೇ.8 ರಷ್ಟು ಲಾಭಾಂಶ ನೀಡಲಾಗುವುದು ಎಂದು ಪ್ರಕಟಿಸಿದರು.ಪ್ರಸಕ್ತ ಸಾಲಿನಲ್ಲಿ ಸಂಘ 90 ಲಕ್ಷ ರೂ. ಠೇವಣಿ ಸಂಗ್ರಹಿಸಿದ್ದು , 50 ಲಕ್ಷ ರೂ. ಸಾಲ ವಿತರಣೆ ಮಾಡಲಾಗಿದೆ ಎಂದ ಅವರು ಸಂಘದ ಕಛೇರಿಯ ಮೇಲ್ಬಾಗದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಸಹಕಾರ ಭವನ ನಿರ್ಮಿಸಲಾಗುತ್ತಿದ್ದು, ನವೆಂಬರ್ ತಿಂಗಳಿನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದರು.
ಸಂಘದ ಕಾರ್ಯದರ್ಶಿ ಸಂತೋಷ್ ವಾರ್ಷಿಕ ವರದಿಯನ್ನು ಮಂಡಿಸಿದರು, ಉಪಾಧ್ಯಕ್ಷ ಸಿ.ಎಸ್.ಮಹೇಂದ್ರ ನಿರ್ದೇಶಕರಾದ ಸಿ.ಆರ್.ಹೇಮಂತಕುಮಾರ್, ಸಿ.ಎಸ್.ಏಕಾಂತರಾಮು, ಬಿ.ವಿರೂಪಾಕ್ಷಪ್ಪ, ಸಿ.ಸಿ.ಪ್ರಭಾಕರ್, ಎಲ್.ಕೆ.ರುಕ್ಮಿಣಿಮೂರ್ತಿ ಉಪಸ್ಥಿತರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin