ಗೋಕರ್ಣ ದೇವಾಲಯವನ್ನು ವಶಕ್ಕೆ ಪಡೆಯುವ ಸರ್ಕಾರ ಪ್ರಯತ್ನ ಸಮಂಜಸವಲ್ಲ : ಬಿಎಸ್ವೈ

ಈ ಸುದ್ದಿಯನ್ನು ಶೇರ್ ಮಾಡಿ

YADI

ಚಿತ್ರದುರ್ಗ, ಅ.9-ಹೊಸನಗರದ ರಾಮಚಂದ್ರಪುರ ಮಠ ವಶಕ್ಕೆ ಪಡೆಯುವುದು ಸರ್ಕಾರಕ್ಕೆ ಸಾಧ್ಯವಿಲ್ಲದ ಮಾತು. ಅನಗತ್ಯ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಯಾರೂ ಅವಕಾಶ ಮಾಡಿಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಚಂದ್ರಪುರ ಮಠಕ್ಕೆ ಗೋಕರ್ಣ ದೇವಾಲಯವನ್ನು ಕಾನೂನು ಚೌಕಟ್ಟಿನಲ್ಲಿಯೇ ವಹಿಸಿಕೊಟ್ಟಿದ್ದೆ. ಅದು ಚೆನ್ನಾಗಿಯೇ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಅದನ್ನು ಸರ್ಕಾರ ವಶಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿರುವುದು ಸಮಂಜಸವಲ್ಲ. ಇದಕ್ಕೆ ಅವಕಾಶವನ್ನೂ ಕೊಡಬಾರದು ಎಂದು ಅವರು ತಿಳಿಸಿದ್ದಾರೆ.

ರಾಮಚಂದ್ರಪುರ ಮಠದ ಸುಪರ್ದಿಯಲ್ಲಿರುವ ಗೋಕರ್ಣ ಮಹಾಬಲೇಶ್ವರ ದೇವಾಲಯವನ್ನು ಸರ್ಕಾರ ವಶಕ್ಕೆ ಪಡೆಯಬೇಕು. ರಾಮಚಂದ್ರಾಪುರ ಮಠದಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದ್ದು, ಮಠಕ್ಕೆ ಆಡಳಿತಾಧಿಕಾರಿ ನೇಮಿಸಬೇಕೆಂದು ಹಲವರು ದೂರು ನೀಡಿದ್ದು, ಈ ಬಗ್ಗೆ ಸರ್ಕಾರ ಕೆಲವು ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ನಿನ್ನೆ ರಾಮಚಂದ್ರಾಪುರ ಮಠದಲ್ಲಿ ರಾಘವೇಶ್ವರ ಶ್ರೀಗಳ ನೇತೃತ್ವದಲ್ಲಿ ಸಾವಿರಾರು ಭಕ್ತರು ಮೌನ ಪ್ರತಿಭಟನೆ ನಡೆಸಿ ಸರ್ಕಾರದ ಕ್ರಮವನ್ನು ವಿರೋಧಿಸಿದ್ದರು. ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ಕೂಡ ನೀಡಿದ್ದರು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ , ಇಂತಹ ಕೆಲಸಗಳಿಗೆ ಸರ್ಕಾರ ಕೈ ಹಾಕಬಾರದು ಎಂದು ರಾಘವೇಶ್ವರ ಶ್ರೀಗಳ ಪರ ಬ್ಯಾಟಿಂಗ್ ಮಾಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin