ಗೋರಕ್ಷಕರ ನಿರ್ಬಂಧ : ಕರ್ನಾಟಕ ಸೇರಿ 6 ರಾಜ್ಯಗಳಿಗೆ ಸುಪ್ರೀಂ ನೋಟಿಸ್

ಈ ಸುದ್ದಿಯನ್ನು ಶೇರ್ ಮಾಡಿ

Supreme-Court

ನವದೆಹಲಿ, ಏ.7-ಗೋರಕ್ಷಕ ಸಮೂಹಗಳ ಮೇಲೆ ನಿಷೇಧ ಹೇರುವಂತೆ ಕೋರಿ ಸಲ್ಲಿಸಿಲಾದ ಮನವಿ ಮೇರೆಗೆ ಕರ್ನಾಟಕ, ರಾಜಸ್ತಾನ ಸೇರಿದಂತೆ ಆರು ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್‍ಗಳನ್ನು ಜಾರಿಗೊಳಿಸಿ ಮೂರು ವಾರಗಳ ಒಳಗೆ ಪ್ರತ್ಯುತ್ತರ ನೀಡುವಂತೆ ಸೂಚಿಸಿದೆ.  ರಾಜಸ್ತಾನದ ಅಲ್ವಾರ್‍ನಲ್ಲಿ ಗೋರಕ್ಷಕರ ಹಲ್ಲೆಯಿಂದಾಗಿ ವ್ಯಕ್ತಿಯೊಬ್ಬ ಹತನಾದನೆನ್ನಲಾದ ಪ್ರಕರಣದ ಬೆನ್ನಲ್ಲೇ ಈ ಬೆಳವಣಿಗೆ ಕಂಡುಬಂದಿದೆ. ಗೋರಕ್ಷಕರಿಗೆ ನಿರ್ಬಂಧ ವಿಧಿಸಬೇಕೆಂದು ಅವರನ್ನು ಕೋರಿ ಸಲ್ಲಿಸಲಾಗಿದ್ದ ಮನವಿ ಕುರಿತು ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಮತ್ತು ಎ.ಎಂ.ಖಾನ್‍ವಿಲ್ಕರ್ ಒಳಗೊಂಡ ಪೀಠವು ಇಂದು ವಿಚಾರಣೆ ನಡೆಸಿತು. ರಾಜಸ್ತಾನದ ಅಲ್ವಾರ್‍ನಲ್ಲಿ ಗೋರಕ್ಷಕರಿಂದ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು.

ಈ ಹಿನ್ನೆಲೆಯಲ್ಲಿ ರಾಜಸ್ತಾನ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಜಾರ್ಖಂಡ್, ಮತ್ತು ಉತ್ತರಪ್ರದೇಶ ರಾಜ್ಯಗಳಿಗೆ ನೋಟಿಸ್‍ಗಳನ್ನು ನೀಡಿರುವ ಸರ್ವೋಚ್ಚ ನ್ಯಾಯಾಲಯ ಮೂರು ವಾರಗಳ ಒಳಗೆ ಪ್ರತ್ಯುತ್ತರ ನೀಡುವಂತೆ ಸೂಚಿಸಿ ಮುಂದಿನ ವಿಚಾರಣೆ ದಿನಾಂಕವನ್ನು ಮೇ 3ಕ್ಕೆ ನಿಗದಿಗೊಳಿಸಿದೆ.

Facebook Comments

Sri Raghav

Admin