ಗೋರಕ್ಷಣೆಯ ಹೆಸರಿನಲ್ಲಿ ಎಸಗುವ ಕ್ರಿಮಿನಲ್ ಚಟುವಟಿಕೆಗಳಿಗೆ ರಕ್ಷಣೆ ನೀಡುವುದಿಲ್ಲ : ರಾಜ್ಯ ಸರ್ಕಾರ

ಈ ಸುದ್ದಿಯನ್ನು ಶೇರ್ ಮಾಡಿ

Suprem-Court

ಬೆಂಗಳೂರು,ಮೇ 5- ಯಾವುದೇ ವ್ಯಕ್ತಿ, ಸಮೂಹಗಳು ಗೋರಕ್ಷಣೆಯ ಹೆಸರಿನಲ್ಲಿ ಎಸಗುವ ಅಪರಾಧ ಅಥವಾ ಕ್ರಿಮಿನಲ್ ಚಟುವಟಿಕೆಗಳಿಗೆ ರಕ್ಷಣೆಯನ್ನು ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ನಲ್ಲಿ ಸ್ಪಷ್ಟಪಡಿಸಿದೆ.  ಸರ್ವೋಚ್ಚ ನ್ಯಾಯಾಲಯದ ಮುಂದೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ದಾವೆಯೊಂದರಲ್ಲಿ ಗೋವಿನ ರಕ್ಷಣೆಯ ಹೆಸರಿನಲ್ಲಿ ಹಿಂಸೆಯನ್ನು ಮಾಡುವ ಗುಂಪುಗಳನ್ನು ನಿಷೇಧಿಸಬೇಕು ಎಂಬುದಾಗಿ ಕೋರಲಾಗಿತ್ತು. ಇದೇ ವೇಳೆ ಕರ್ನಾಟಕ ಗೋವಧೆ ತಡೆ ಹಾಗೂ ಜಾನುವಾರು ಸಂರಕ್ಷಣಾ ಕಾಯಿದೆ, 1964 ರ ಪರಿಚ್ಛೇಧ 15 ಅಸಾಂವಿಧಾನಿಕ ಎಂದು ಪರಿಗಣಿಸುವಂತೆಯೂ ಕೋರಲಾಗಿತ್ತು. ಈ ಸಂಬಂಧ ಕರ್ನಾಟಕ ಸರ್ಕಾರವು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಕೌಂಟರ್ ಆಫಿಡವಿಟ್ ಸಲ್ಲಿಸಿದೆ ಎಂದು ತಿಳಿಸಿದೆ.ಈ ಅಫಿಡವಿಟ್‍ನಲ್ಲಿ ಕರ್ನಾಟಕ ಗೋವಧೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 1964 ರ ಪರಿಚ್ಛೇಧ 15 ರ ಅಡಿಯಲ್ಲಿ ಕಾನೂನು ರೀತ್ಯಾ ರಚಿಸಲಾದ ಗುಂಪು ಅಥವಾ ಈ ಕಾನೂನಿನಡಿ ಕ್ರಮ ಕೈಗೊಳ್ಳಬಹುದಾದ ಅಧಿಕಾರವುಳ್ಳ ವ್ಯಕ್ತಿಗಳು ಉತ್ತಮ ಉದ್ದೇಶದಿಂದ ಕಾನೂನಿನಲ್ಲಿ ನೀಡಲಾಗಿರುವ ಅವಕಾಶದನ್ವಯ ಜರುಗಿಸಿದ ಕ್ರಮಗಳಿಗೆ ರಕ್ಷಣೆ ನೀಡುತ್ತದೆ ಎಂದು ಹೇಳಿದೆ.  ಕರ್ನಾಟಕ ಸರ್ಕಾರವು ಗೋರಕ್ಷಕರನ್ನು ರಕ್ಷಿಸುವ ಕಾನೂನನ್ನು ಸಮರ್ಥಿಸಿಕೊಂಡಿದೆ ಎನ್ನುವ ಅರ್ಥದಲ್ಲಿ ಇಂದಿನ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರಿಂದ ಸಾರ್ವಜನಿಕರಲ್ಲಿ ಅನಗತ್ಯ ಗೊಂದಲಗಳು ಉಂಟಾಗಬಾರದು ಎಂಬ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin