ಗೋವಾದಲ್ಲಿ ಕನ್ನಡಿಗರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

Kannadigas

ಬೆಳಗಾವಿ, ಅ.22-ಗೋವಾದ ಟಸ್ಕ್‍ಉಸಗಾಂವ್ ಮತ್ತು ಪೊಂಡಾದಲ್ಲಿ ಕನ್ನಡಿಗರ ಕುಟುಂಬಗಳ ಮೇಲೆ ದಾಳಿ ನಡೆಸಿ ಮನೆ ಹಾಗೂ ವಾಹನಗಳನ್ನು ಸುಟ್ಟು ಹಾಕಿರುವ ಪ್ರಕರಣವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಇಂದು ನಗರದ ಚೆನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಗೋವಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪೊಂಡಾ ನಗರದಲ್ಲಿ ಸುಮಾರು 50 ವರ್ಷಗಳಿಂದ 500ಕ್ಕೂ ಹೆಚ್ಚು ಕನ್ನಡಿಗ ಕುಟುಂಬಗಳು ನೆಲೆಸಿದ್ದು, ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಸೌಹಾರ್ದಯುತವಾಗಿ ಜೀವನ ಸಾಗಿಸುತ್ತಿದ್ದಾರೆ. ಆದರೆ ಗೋವಾ ಜನ ಕನ್ನಡಿಗ ವಾಹನ ಚಾಲಕರ ಮೇಲೆ ಹಲ್ಲೆ ನಡೆಸಿದ್ದರು. ಇದನ್ನು ಆತನ ಪೋಷಕರು ಪ್ರಶ್ನಿಸಿದ್ದಕ್ಕೆ ನಿಂದಿಸಿ ಅವರ ಮೇಲೂ ಹಲ್ಲೆ ಮಾಡಿ ಆಸ್ತಿ ಪಾಸ್ತಿಯನ್ನು ಸುಟ್ಟು ಹಾಕಿದ್ದಾರೆ. ಇದೊಂದು ಹೇಯ ಕೃತ್ಯವಾಗಿದ್ದು, ಕೂಡಲೇ ಕನ್ನಡಿಗರ ಆಸ್ತಿ-ಪಾಸ್ತಿ ಸುಟ್ಟು ಹಾಕಿರುವವ ಮೇಲೆ ಕ್ರಮ ಕೈಗೊಳ್ಳಬೇಕೆಂದು ಸ್ವಾಭಿಮಾನಿ ಬಣದ ಮುಖಂಡರು ಒತ್ತಾಯಿಸಿದ್ದಾರೆ.

ಪೊಲೀಸ್ ಇಲಾಖೆ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳುವುದು ಬಿಟ್ಟು, ಹಲ್ಲೆಗೊಳಗಾದ ಕನ್ನಡಿಗರ ಮೇಲೆಯೇ ಗೂಂಡಾ ಕಾಯ್ದೆ ಹೇರಲು ಪ್ರಯತ್ನಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಗೋವಾ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಿ ಕನ್ನಡಿಗರಿಗೆ ನ್ಯಾಯ ಒದಗಿಸಬೇಕೆಂದು ಕರವೇ ಸ್ವಾಭಿಮಾನಿ ಬಣದ ದೀಪಕ್ ಗುಡಗನಟ್ಟಿ ಮತ್ತಿತರರು ಆಗ್ರಹಿಸಿದ್ದಾರೆ.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin