ಗೋವಾ ಕನ್ನಡಿಗರ ರಕ್ಷಣೆಗೆ ಆಗ್ರಹಿಸಿ ಸಿಎಂ ನಿವಾಸದ ಮುಂದೆ ಸತ್ಯಾಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

Vatal--02

ಬೆಂಗಳೂರು, ಅ.7- ಗೋವಾ ಸರ್ಕಾರ ಕನ್ನಡಿಗರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಗೋವಾ ನಿರಾಶ್ರಿತ ಕನ್ನಡಿಗರಿಗೆ ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಮುಖ್ಯಮಂತ್ರಿ ನಿವಾಸದ ಮುಂದೆ ಸತ್ಯಾಗ್ರಹ ನಡೆಸಲು ಮುಂದಾದ ಕನ್ನಡ ಒಕ್ಕೂಟದ ಮುಖಂಡರಾದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

ಕನ್ನಡ ಸೇನೆಯ ಕೆ.ಆರ್.ಕುಮಾರ್, ಪ್ರವೀಣ್‍ಕುಮಾರ್ ಶೆಟ್ಟಿ, ಮಂಜುನಾಥ್ ದೇವು, ಗಿರೀಶ್‍ಗೌಡ, ಶಿವರಾಮೇಗೌಡ ಸೇರಿದಂತೆ ಅನೇಕ ಮುಖಂಡರು ಗೋವಾ ಕನ್ನಡಿಗರ ಮೇಲಿನ ದೌರ್ಜನ್ಯ ಖಂಡಿಸಿ ಮುಖ್ಯಮಂತ್ರಿ ನಿವಾಸದ ಎದುರು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ವಶಕ್ಕೆ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಗೋವಾ ಸರ್ಕಾರದ ದೌರ್ಜನ್ಯದಿಂದ ಅಲ್ಲಿನ ಕನ್ನಡಿಗರು ನಿರಾಶ್ರಿತರಾಗಿದ್ದಾರೆ.  ಅವರ ಅಲ್ಲಿನ ಕನ್ನಡಿಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಕೂಡಲೇ 2 ಕೋಟಿ ರೂ. ಗಳನ್ನು ಸರ್ಕಾರ ಬಿಡುಗಡೆ ಮಾಡಬೇಕು.

ಒಕ್ಕೂಟ ವ್ಯವಸ್ಥೆ ಧಿಕ್ಕರಿಸಿ ಕನ್ನಡಿಗರನ್ನು ಪದೇ ಪದೇ ಒಕ್ಕಲೆಬ್ಬಿಸುತ್ತಿರುವ ಗೋವಾ ಸರ್ಕಾರವನ್ನು ವಜಾ ಮಾಡಬೇಕೆಂದು ಆಗ್ರಹಿಸಿದರು.
ಸಾ.ರಾ.ಗೋವಿಂದ್ ಮಾತನಾಡಿ, ಸರ್ಕಾರ ಮಧ್ಯಪ್ರವೇಶಿಸಿ ಗೋವಾ ಕನ್ನಡಿಗರಿಗೆ ರಕ್ಷಣೆ ನೀಡದಿದ್ದರೆ ಸದ್ಯದಲ್ಲೇ ಕನ್ನಡ ಒಕ್ಕೂಟದ ಮುಖಂಡರು, ಕಾರ್ಯಕರ್ತರು ಗೋವಾಕ್ಕೆ ತೆರಳಿ ಅಲ್ಲಿನ ಕನ್ನಡಿಗರ ರಕ್ಷಣೆಗೆ ಮುಂದಾಗುತ್ತೇವೆ ಎಂದು ಹೇಳಿದರು.

Facebook Comments

Sri Raghav

Admin