ಗೋವಾ ನಿಯೋಗ ದಿಢೀರ್ ಭೇಟಿ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಬಿಎಸ್ವೈ
ಈ ಸುದ್ದಿಯನ್ನು ಶೇರ್ ಮಾಡಿ
ಬೆಂಗಳೂರು, ಜ.28- ಗೋವಾ ನಿಯೋಗ ಇಂದು ಕಳಸಾ-ಬಂಡೂರಿಯ ಕಣಕುಂಬಿಗೆ ದಿಢೀರ್ ಭೇಟಿ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಗೋವಾದ ಶಾಸಕರು, ಮಾಜಿ ಶಾಸಕರು, ಸ್ಪೀಕರ್, ಡೆಪ್ಯೂಟಿ ಸ್ಪೀಕರ್ ಸೇರಿದಂತೆ 40 ಜನರ ತಂಡ ಇಂದು ಕಣಕುಂಬಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಮಹದಾಯಿಗಾಗಿ ಆಗ್ರಹಿಸಿ ಈ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ನಿನ್ನೆಯಷ್ಟೆ ಸರ್ವಪಕ್ಷ ಸಭೆ ನಡೆದು ವಿಫಲವಾಗಿತ್ತು. ಬಿಜೆಪಿ, ಕಾಂಗ್ರೆಸ್ ನಡುವೆ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗಿತ್ತು. ಇಂದು ದಿಢೀರ್ ಎಂದು ಗೋವಾ ನಿಯೋಗ ಭೇಟಿ ನೀಡಿರುವುದು ತೀವ್ರ ಕುತೂಹಲ ಮೂಡಿಸಿದೆ.
Facebook Comments