ಗೋವಾ ರಾಜ್ಯಪಾಲರ ವಿರುದ್ಧ ಡಿ.ಕೆ.ಶಿವಕುಮಾರ್ ಗರಂ

ಈ ಸುದ್ದಿಯನ್ನು ಶೇರ್ ಮಾಡಿ

DKS

ಬೆಂಗಳೂರು, ಮಾ.13-ಗೋವಾ ರಾಜ್ಯದಲ್ಲಿ ಮತದಾರರು ಕಾಂಗ್ರೆಸ್ ಬೆಂಬಲಿಸಿದ್ದರೂ ಅಲ್ಲಿನ ರಾಜ್ಯಪಾಲರು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ರಾಜಕೀಯ ಪಕ್ಷದ ಕಾರ್ಯಕರ್ತರಂತೆ ಕೆಲಸ ಮಾಡುತ್ತಿದ್ದಾರೆ. ಗೋವಾದಲ್ಲಿ ಸರ್ಕಾರ ರಚನೆಗೆ 15ದಿನಗಳ ಕಾಲ ಅವಕಾಶ ಮಾಡಿಕೊಡುವ ಮೂಲಕ ಕುದುರೆ ವ್ಯಾಪಾರಕ್ಕೆ ರಾಜ್ಯಪಾಲರೇ ಆಹ್ವಾನ ನೀಡಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ದೊಡ್ಡ ಪಕ್ಷದ ಜೊತೆ ಮಾತುಕತೆಗೆ ಮುಂದಾಗುವ ಬದಲು ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದ ಅವರು, ಉತ್ತರ ಹಾಗೂ ದಕ್ಷಿಣ ಭಾರತಕ್ಕೂ ವ್ಯತ್ಯಾಸವಿದೆ. ಉತ್ತರ ಭಾರತದಲ್ಲಿ ಬಿಜೆಪಿ ಆಡಳಿತ ಜನರು ನೋಡಿರಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಆಡಳಿತಾವಧಿಯನ್ನು ಜನ ನೋಡಿದ್ದಾರ. ಉತ್ತರ ಪ್ರದೇಶದಲ್ಲಿ ಜನ ಬದಲಾವಣೆ ಬಯಸಿದ್ದರಿಂದ ಆಡಳಿತ ವಿರೋಧಿ ಅಲೆ ಬಿಜೆಪಿಗೆ ಚುನಾವಣೆಯಲ್ಲಿ ವರವಾಗಿ ಪರಿಣಮಿಸಿದೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin