ಗೋವಾ ಸಿಎಂ ಲಕ್ಷ್ಮಿ ಪರ್ಸೇಕರ್ ಪರಾಭವ

ಈ ಸುದ್ದಿಯನ್ನು ಶೇರ್ ಮಾಡಿ

Laxmikant-Parsekar

ಪಣಜಿ,ಮಾ.11– ಅಚ್ಚರಿಯ ಬೆಳವಣಿಗೆಯಲ್ಲಿ ಗೋವಾದ ಮುಖ್ಯಮಂತ್ರಿ ಲಕ್ಷ್ಮಿ ಪರ್ಸೇಕರ್ ಪರಾಭವಗೊಂಡಿದ್ದಾರೆ. ಗೋವಾದ ಮಂಡ್ರೇಮ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಲಕ್ಷ್ಮಿ ಪರ್ಸೇಕರ್ ಕಾಂಗ್ರೆಸ್ ಅಭ್ಯರ್ಥಿ ದಯಾನಂದ್ ಪಾಟೀಲ್ ಸೋಪ್ಟೆ ಅವರ ವಿರುದ್ಧ ಸೋಲು ಅನುಭವಿಸಿದ್ದಾರೆ. ಪ್ರಾರಂಭಿಕ ಸುತ್ತಿನಿಂದಲೂ ಹಿನ್ನಡೆ ಅನುಭವಿಸಿದ್ದ ಪರ್ಸೇಕರ್ ಸುಮಾರು 1700ಕ್ಕೂ ಅಧಿಕ ಮತಗಳಿಂದ ಸೋಲು ಅನುಭವಿಸಿ ಮತಗಟ್ಟೆಯಿಂದ ನಿರ್ಗಮಿಸಿದರು.   ಮುಖ್ಯಮಂತ್ರಿಯೇ ಪರಾಭವಗೊಂಡಿರುವುದರಿಂದ ಬಿಜೆಪಿಗೆ ಭಾರೀ ಮುಜುಗರವಾಗಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕರ್ ಕೇಂದ್ರದಲ್ಲಿ ರಕ್ಷಣಾ ಸಚಿವರಾದ ಕಾರಣ ರಾಜೀನಾಮೆ ನೀಡಿದ್ದರು. ಅಚ್ಚರಿ ಎಂಬಂತೆ ಮುಖ್ಯಮಂತ್ರಿ ಅಭ್ಯರ್ಥಿಗೆ ಲಕ್ಷ್ಮಿ ಪರ್ಸೇಕರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ಅವರೇ ಪರಾಭವಗೊಂಡಿರುವುದರಿಂದ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin