ಗೌಡರ ಮನವೊಲಿಕೆ ಯಶಸ್ವಿ, ಪಿಳ್ಳಮುನಿಶಾಮಪ್ಪ ರಾಜೀನಾಮೆ ವಾಪಸ್

ಈ ಸುದ್ದಿಯನ್ನು ಶೇರ್ ಮಾಡಿ

Devegowda-a014

ಬೆಂಗಳೂರು, ಫೆ.24- ದೇವನಹಳ್ಳಿಯ ಜೆಡಿಎಸ್ ಶಾಸಕ ಪಿಳ್ಳ ಮುನಿಶಾಮಪ್ಪ ನಿನ್ನೆ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಪತ್ರವನ್ನು ಇಂದು ವಾಪಸ್ ಪಡೆದಿದ್ದಾರೆ.   ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮನವಿಗೆ ಸ್ಪಂದಿಸಿ ಇಂದು ಬೆಳಗ್ಗೆ ರಾಜೀನಾಮೆ ಪತ್ರವನ್ನು ಮುನಿಶಾಮಪ್ಪ ವಾಪಸ್ ಪಡೆದಿದ್ದಾರೆ.  ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರ ನಿವಾಸಕ್ಕೆ ಇಂದು ಬೆಳಗ್ಗೆ ತೆರಳಿದ ಮುನಿಶಾಮಪ್ಪ ಶಾಸಕ ಸ್ಥಾನಕ್ಕೆ ನಿನ್ನೆ ನೀಡಿದ್ದ ರಾಜೀನಾಮೆ ಪತ್ರವನ್ನು ವಾಪಸ್ ಪಡೆದರು.  ನಿಸರ್ಗ ನಾರಾಯಣಸ್ವಾಮಿ ಅವರನ್ನು ಜೆಡಿಎಸ್‍ಗೆ ಸೇರ್ಪಡೆ ಮಾಡಿಕೊಂಡಿದ್ದರಿಂದ ಬೇಸರಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜತೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ತಮ್ಮ ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಾರಾಯಣಸ್ವಾಮಿಯವರನ್ನು ಸೇರ್ಪಡೆ ಮಾಡಿಕೊಂಡಿದ್ದಾರೆ ಎಂದು ಅಸಮಾಧಾನಗೊಂಡಿದ್ದರು.

ನಿನ್ನೆ ರಾಜೀನಾಮೆ ನೀಡಿದ ನಂತರ ಜೆಡಿಎಸ್ ಶಾಸಕರು ಮನವೊಲಿಸುವ ಪ್ರಯತ್ನ ಮಾಡಿದ್ದರೂ ತಮ್ಮ ನಿರ್ಧಾರದಿಂದ ಹಿಂದೆ ಸರಿಯದ ಮುನಿಶಾಮಪ್ಪ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಾಗಿ ಘೋಷಿಸಿ ರಾಜೀನಾಮೆ ಪತ್ರ ವಾಪಸು ಪಡೆಯುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದರು.  ಇದರ ಬೆನ್ನಲ್ಲೇ ನಿನ್ನೆ ರಾತ್ರಿ ದೆಹಲಿಯಿಂದ ಆಗಮಿಸಿದ ದೇವೇಗೌಡರು, ಮಾಜಿ ಸಚಿವ ಸಿ.ಚನ್ನಿಗಪ್ಪ ಮತ್ತಿತರ ಪಕ್ಷದ ಮುಖಂಡರೊಂದಿಗೆ ಮುನಿಶಾಮಪ್ಪ ಅವರ ಮನೆಗೆ ತೆರಳಿ ಮನವೊಲಿಸುವಲ್ಲಿ ಯಶಸ್ವಿಯಾದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡುವ ಭರವಸೆಯನ್ನು ಗೌಡರು ನೀಡಿ ರಾಜೀನಾಮೆ ಪತ್ರ ವಾಪಸ್ ಪಡೆಯುವಂತೆ ಸಲಹೆ ಮಾಡಿದ್ದರು. ಗೌಡರ ಮಾತಿಗೆ ಮನ್ನಣೆ ನೀಡಿ ಇಂದು ಬೆಳಗ್ಗೆ ಮುನಿಶಾಮಪ್ಪ ರಾಜೀನಾವÉು ಪತ್ರ ವಾಪಸು ಪಡೆದರು.  ಇದರೊಂದಿಗೆ ಜೆಡಿಎಸ್‍ನಲ್ಲಿ ಉಂಟಾಗಿದ್ದ ಭಿನ್ನಮತದ ಬಿಕ್ಕಟ್ಟು ಸುಖಾಂತ್ಯ ಕಂಡಂತಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin