ಗೌಡರ ಸಮ್ಮುಖದಲ್ಲಿ ವಿಧ್ಯುಕ್ತವಾಗಿ ಜೆಡಿಎಸ್ ಸೇರಿದ ಎಚ್.ವಿಶ್ವನಾಥ್

ಈ ಸುದ್ದಿಯನ್ನು ಶೇರ್ ಮಾಡಿ

JDS-Vishwanath--01

ಬೆಂಗಳೂರು, ಜು.4-ಮಾಜಿ ಸಚಿವ ಎಚ್.ವಿಶ್ವನಾಥ್ ಇಂದು ವಿಧ್ಯುಕ್ತವಾಗಿ ಜಾತ್ಯತೀತ ಜನತಾದಳಕ್ಕೆ ಸೇರ್ಪಡೆಯಾದರು. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹಾಗೂ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ವಿಶ್ವನಾಥ್ ಜೆಡಿಎಸ್‍ಗೆ ಸೇರಿದರು.
ಅಪಾರ ಅಭಿಮಾನಿಗಳು, ಕಾರ್ಯಕರ್ತರು ಪಾಲ್ಗೊಂಡು ಅಭಿನಂದಿಸಿದರು. [ ವಿಧಾನಸಭಾ ಚುನಾವಣೆ–2018 : ರಾಜಕೀಯ ಪಕ್ಷಗಳಲ್ಲಿನ ಪ್ರಸ್ತುತ ಬೆಳವಣಿಗೆಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ…]

JDS-Vishwanath--02

ಇದೇ ವೇಳೆ ಪಕ್ಷದ ಧ್ವಜವನ್ನು ನೀಡಿ ವಿಶ್ವನಾಥ್ ಅವರನ್ನು ಬರಮಾಡಿಕೊಳ್ಳಲಾಯಿತು. ಇದಕ್ಕೂ ಮುನ್ನ ಬಸವನಗುಡಿಯ ದೊಡ್ಡ ಗಣಪತಿ ದೇವಾಲಯದಲ್ಲಿ ವಿಶೇಷ ಸಲ್ಲಿಸಿದ ವಿಶ್ವನಾಥ್, ಪಕ್ಷದ ಕಚೇರಿಗೆ ತೆರಳಿದ್ದರು. ಕೆಲ ದಿನಗಳಿಂದ ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ವಿಶ್ವನಾಥ್ ಪಕ್ಷ ಬಿಡುವ ಮುನ್ಸೂಚನೆ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ್ದ ವಿಶ್ವನಾಥ್ ಕಾಂಗ್ರೆಸ್‍ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು.

H-Vishwanath--01

ನಂತರ ಜೆಡಿಎಸ್‍ಗೆ ಸೇರ್ಪಡೆಗೊಳ್ಳುವ ಇಂಗಿತ ವ್ಯಕ್ತಪಡಿಸಿದ ಅವರು, ಜು.4 ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆ ವಿಚಾರ ಪ್ರಕಟಿಸಿದ್ದರು. ಅದರಂತೆ ಇಂದು ನಡೆದ ಸಮಾರಂಭದಲ್ಲಿ ಅಪಾರ ಅಭಿಮಾನಿಗಳು, ಕಾರ್ಯಕರ್ತರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin