ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್ಆರ್ಟಿಸಿಯಿಂದ ವಿಶೇಷ ಸಾರಿಗೆ ವೆವಸ್ಥೆ

ಈ ಸುದ್ದಿಯನ್ನು ಶೇರ್ ಮಾಡಿ

ksrtc

ಬೆಂಗಳೂರು, ಆ.30-ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ ಸೆ.2 ರಿಂದ 4ರವರೆಗೆ ಬೆಂಗಳೂರಿನಿಂದ ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.  ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸೆ.5ರಂದು ವಿಶೇಷ ವಾಹನಗಳು ಕಾರ್ಯಾಚರಣೆ ಮಾಡಲಿವೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರ ರಾಜ್ಯಗಳಿಗೆ ವಿಶೇಷ ಬಸ್ ಸೌಕರ್ಯ ಕಲ್ಪಿಸಲಾಗಿದೆ. ಬೆಂಗಳೂರು ನಗರದ ವಿಜಯನಗರ, ಜೆ.ಪಿ.ನಗರ, ಜಯನಗರ 4ನೇ ಬ್ಲಾಕ್ ಮತ್ತು 9ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ ಮತ್ತು ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

1200 ರಿಂದ 1300 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಈಶಾನ್ಯ, ವಾಯುವ್ಯ ಕರ್ನಾಟಕದ ಪ್ರದೇಶಗಳಿಗೂ ಹೆಚ್ಚುವರಿ ಬಸ್ ಸಂಚರಿಸಲಿವೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ. ಇ-ಟಿಕೇಟ್ ಬುಕ್ಕಿಂಗ್‌ನ್ನು  www.ksrtc.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.

ಸಾರ್ವಜನಿಕ ಪ್ರಯಾಣಿಕರು ಬೆಂಗಳೂರು ನಗರದಲ್ಲಿರುವ 171, ಮೈಸೂರು ನಗರದಲ್ಲಿರುವ 17 ಹಾಗೂ ಮಂಗಳೂರಿನಲ್ಲಿರುವ 35 ಹಾಗೂ ರಾಜ್ಯದ ಇತರೆ ಸ್ಥಳಗಳಲ್ಲಿರುವ 230 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.  ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin