ಗ್ಯಾರೇಜ್‍ನಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು

ಈ ಸುದ್ದಿಯನ್ನು ಶೇರ್ ಮಾಡಿ

Garrage--01

ಬೆಂಗಳೂರು,ಮಾ.7-ಗ್ಯಾರೇಜ್‍ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಜೆಸಿನಗರ ಠಾಣೆ ಸಮೀಪದ 100 ಮೀಟರ್ ಅಂತರದಲ್ಲಿ ಹಳೆ ಗ್ಯಾರೇಜ್ ಇದ್ದು ಇಲ್ಲಿ ಕಾರು ಹಾಗೂ ದ್ವಿಚಕ್ರ ವಾಹನಗಳನ್ನು ಸಲ್ಲಿಸಲಾಗಿತ್ತು. ತಡರಾತ್ರಿ ಈ ವಾಹನಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಸುದ್ದಿ ತಿಳಿದ ಜೆಸಿನಗರ ಠಾಣೆ ಪೊಲೀಸರು ಅಗ್ನಿಶಾಮಕ ದಳಕ್ಕೆ ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ವಾಹನದೊಂದಿಗೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯಿಂದಾಗಿ ಗ್ಯಾರೇಜ್ ಬಳಿ ನಿಲ್ಲಿಸಲಾಗಿದ್ದ ಕಾರು ಹಾಗೂ ಬೈಕ್‍ಗಳು ಹಾನಿಗೀಡಾಗಿವೆ. ಜೆಸಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin