ಗ್ರಾಮದಲ್ಲಿ ಚಿರತೆಗಳು ಪ್ರತ್ಯಕ್ಷ

ಈ ಸುದ್ದಿಯನ್ನು ಶೇರ್ ಮಾಡಿ

chirate

ದಾವಣಗೆರೆ, ಆ.16-ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಉಚ್ಚಂಗಿ ದುರ್ಗದಲ್ಲಿ ಹಾಲಮ್ಮನ ತೋಟದ ಬಳಿ ಮೂರು ಚಿರತೆಗಳು ಪ್ರತ್ಯಕ್ಷವಾಗಿದ್ದು, ಎರಡು ಮೇಕೆಗಳನ್ನು ತಿಂದು ಹಾಕಿರುವ ಘಟನೆ ಇಂದು ನಡೆದಿದೆ.  ಚಿರತೆ ಕಂಡ ಗ್ರಾಮಸ್ಥರು ಭಯಭೀತರಾಗಿದ್ದು, ಮನೆಯಿಂದ ಹೊರಬರಲು ಭಯಪಡುತ್ತಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಬಂದು ಪರಿಶೀಲಿಸಿ, ಚಿರತೆಗಳನ್ನು ಸೆರೆಹಿಡಿಯಲು ಮುಂದಾಗಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin