ಗ್ರೇಟರ್ ನೋಯ್ಡಾದಲ್ಲಿ ನೈಜೀರಿಯಾ ವಿದ್ಯಾರ್ಥಿ ಮೇಲೆ ಹಲ್ಲೆ : ಯೋಗಿ ಜೊತೆ ಸುಷ್ಮಾ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

Sushma-Swaraj

ನವದೆಹಲಿ, ಮಾ.28- ಗ್ರೇಟರ್ ನೋಯ್ಡಾದಲ್ಲಿ ನೈಜೀರಿಯಾ ವಿದ್ಯಾರ್ಥಿ ಮೇಲೆ ನಡೆದ ಹಲ್ಲೆ ಪ್ರಕರಣದ ಸಂಬಂಧ ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೊಂದಿಗೆ ಸಮಾಲೋಚನೆ ನಡೆಸಿದರು. ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವುದಾಗಿ ಯೋಗಿ ಭರವಸೆ ನೀಡಿದ್ದಾರೆ.   ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾದ ಆಫ್ರಿಕಾ ವಿದ್ಯಾರ್ಥಿಯು ಈ ಪ್ರದೇಶದಲ್ಲಿ ವಾಸಿಸುವುದು ಪ್ರಾಣಕ್ಕೆ ಸಂಚಕಾರ ಉಂಟು ಮಾಡುವಂಥ ಸಂಗತಿಯಾಗಿದೆ. ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳಬೇಕೆಂದು ಟ್ವೀಟ್‍ನಲ್ಲಿ ಸುಷ್ಮಾ ಸ್ವರಾಜ್ ಅವರಲ್ಲಿ ಮನವಿ ಮಾಡಿದ್ದ.

ಈ ಮನವಿಗೆ ಸ್ಪಂದಿಸಿದ ವಿದೇಶಾಂಗ ಸಚಿವರು ಉತ್ತರಪ್ರದೇಶ ಮುಖ್ಯಮಂತ್ರಿ ಅವರೊಂದಿಗೆ ಮಾತನಾಡಿದರು. ಇದೊಂದು ದುರದೃಷ್ಟಕರ ಘಟನೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ಕೈಗೊಳ್ಳುವುದಾಗಿ ಯೋಗಿ ಭರವಸೆ ನೀಡಿದ್ದಾರೆ. ಕೇಂದ್ರ ಸರ್ಕಾರ ಸಹ ಈ ಬಗ್ಗೆ ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸರಣಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin