ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ

ಈ ಸುದ್ದಿಯನ್ನು ಶೇರ್ ಮಾಡಿ

Chamundeshwari
ಮೈಸೂರು, ಜ.31- ಇಂದು ಸಂಜೆ ಸಂಭವಿಸಲಿರುವ ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಗ್ರಹಣ ಕಾಲದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.

ಗ್ರಹಣದ ಹಿನ್ನೆಲೆಯಲ್ಲಿ ಸಂಜೆ 5.30ರವರೆಗೆ ಮಾತ್ರ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ. ನಂತರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಗ್ರಹಣದ ಅವಧಿಯಲ್ಲಿ ದೇವಾಲಯದ ಒಳಗೆ ದೇವಿಗೆ ವಿಶೇಷ ಪೂಜೆ ಮಾಡಲಾಗುತ್ತದೆ. ಈ ವೇಳೆ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin