ಚರ್ಚ್‍ಗಳಲ್ಲಿ ಸಂಭವಿಸಿದ ಸ್ಪೋಟಗಳಲ್ಲಿ 11 ಸಾವು, ಅನೇಕರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Blast--2

ಸುರಬಯಾ, ಮೇ 13-ದ್ವೀಪರಾಷ್ಟ್ರದ ಎರಡನೇ ಅತಿದೊಡ್ಡ ನಗರ ಸುರಬಯಾದಲ್ಲಿ ಇಂದು ಚರ್ಚ್‍ಗಳ ಹೊರಗೆ ಸಂಭವಿಸಿದ ಬಾಂಬ್ ಸ್ಪೋಟಗಳಲ್ಲಿ 11 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ.  ಆತ್ಮಹತ್ಯಾ ಬಾಂಬ್ ಸೇರಿದಂತೆ ಸರಣಿ ಸ್ಫೋಟಗಳಿಂದ ಈ ಪಟ್ಟಣದ ಜನರು ಭಯಭೀತರಾಗಿದ್ದಾರೆ.
ಇಂದು ಬೆಳಗ್ಗೆ 7.30ರಲ್ಲಿ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಬಾಂಬ್ ಸ್ಫೋಟಗಳು ನಡೆದಿವೆ. ಕನಿಷ್ಠ 11 ಮಂದಿ ಹತರಾಗಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ ಎಂದು ಪೊಲೀಸ್ ಉನ್ನತಾಧಿಕಾರಿಗಳು ಹೇಳಿದ್ದಾರೆ.

ವಿಶ್ವದ ಅತ್ಯಂತ ಹೆಚ್ಚು ಮುಸ್ಲಿಂ ಜನಸಂಖ್ಯೆ ಹೊಂದಿರುವ ರಾಷ್ಟ್ರದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ನಡೆದ ದಾಳಿ ಇದಾಗಿದೆ. ಈ ಸರಣಿ ಸ್ಫೋಟಗಳ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಇದು ಮುಸ್ಲಿಂ ಬಂಡುಕೋರರ ಕೃತ್ಯವಿರಬೇಕೆಂದು ಶಂಕಿಸಲಾಗಿದೆ.  ಸ್ಥಳದಲ್ಲಿ ಭಯೋತ್ಪಾದನೆ ನಿಗ್ರಹ ದಳ, ಬಾಂಬ್ ನಿಷ್ಕ್ರಿಯ ದಳಗಳೂ ಸೇರಿದಂತೆ ರಕ್ಷಣಾ ಸಿಬ್ಬಂದಿ ವಾಸ್ತವ್ಯ ಹೂಡಿದ್ದಾರೆ. ಮತ್ತೆ ಬಾಂಬ್ ಸ್ಫೋಟಗಳಾಗುವ ಸಾಧ್ಯತೆ ಇದ್ದು, ಕಟ್ಟೆಚ್ಚರ ವಹಿಸಲಾಗಿದೆ.   ಸುರಬಯಾ ಪಟ್ಟಣದಲ್ಲಿ ಕ್ರೈಸ್ತರು, ಹಿಂದುಗಳು ಮತ್ತು ಬೌದ್ಧಧರ್ಮಿಯರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ಅಲ್ಪಸಂಖ್ಯಾತರು ಆತಂಕಗೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin