ಚಲಿಸುತ್ತಿದ್ದ ವೋಲ್ವೋ ಬಸ್ ಗೆ ಬೆಂಕಿಬಿದ್ದು 3 ವರ್ಷದ ಮಗು ಸಜೀವ ದಹನ

ಈ ಸುದ್ದಿಯನ್ನು ಶೇರ್ ಮಾಡಿ
ಸಾಂಧರ್ಭಿಕ ಚಿತ್ರ
ಸಾಂಧರ್ಭಿಕ ಚಿತ್ರ

ಬೀದರ್,ಸೆ. 16- ಶಿರಡಿಯಿಂದ ಹೈದ್ರಾಬಾದ್‍ಗೆ ತೆರಳುತ್ತಿದ್ದ ಬಸ್‍ಗೆ ಬೆಂಕಿ ತಗುಲಿದ ಪರಿಣಾಮ ಬಸ್‍ನಲ್ಲಿದ್ದ ಮಗು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಹೊರವಲಯದ ಠಾಕೂರ್ ಧಾಖಾ ಸಮೀಪದಲ್ಲಿ ಸಂಭವಿಸಿದೆ.  ವಿಶಾಲ್ ರಾಮ್‍ಪ್ರಸಾದ್(3) ಸಜೀವ ದಹನವಾಗಿರುವ ಮಗುವಾಗಿದೆ.ಪಾಂಡಿಚರಿಯ ಕಾವೇರಿ ಟ್ರಾವಲ್ಸ್‍ಗೆ ಸೇರಿದ ತೆಲಂಗಾಣ ಸ್ಟೇಟ್ ಪ್ರರ್ಮಿಟ್ ಹೊಂದಿರುವ ಸ್ಲೀಪರ್ ಕೋಚ್‍ನ ಎಸಿ ಬಸ್‍ನಲ್ಲಿ 32 ಪ್ರಯಾಣಿಕರಿದ್ದು, ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಬೆಂಕಿಗೆ ಆಹುತಿಯಾಗಿದೆ. ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ 32 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಮೂರು ವರ್ಷದ ಮಗುವು ಸಾವನ್ನಪ್ಪಿದೆ. ಮೂರು ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಅವರನ್ನು ಸ್ಥಳೀಯ ಖಾಸಗಿ ಆಸ್ಪತೆಗೆ ದಾಖಲಿಸಲಾಗಿದೆ. ಹುಮ್ನಾಬಾದ್ ಪೊಲೀಸರು ಪ್ರಕರಣ ದಾಖಲಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin