ಚಾಕು ಇರಿದುಕೊಂಡ ಗಂಡ, ನೇಣಿಗೆ ಶರಣಾದ ಹೆಂಡತಿ : ದಂಪತಿ ಆತ್ಮಹತ್ಯೆ
ಈ ಸುದ್ದಿಯನ್ನು ಶೇರ್ ಮಾಡಿ
ಬಂಗಾರಪೇಟೆ, ಮೇ 21- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ಅನುಮಾನಾಸ್ಪದವಾಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಚಿಕ್ಕ ಕಣಿವೆಕಲ್ಲು ಗ್ರಾಮದಲ್ಲಿ ನಡೆದಿದೆ. ಬಾಲರಾಜು (35), ಪತ್ನಿ ಚಲ್ಲಕಣ್ಣು (20) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಪತಿ ಚಾಕುವಿನಿಂದ ಹೊಟ್ಟೆಗೆ ತಿವಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಪತ್ನಿ ಪತಿಯ ಶವದ ಎದುರೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲೇ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನ ಉಂಟಾಗಿದ್ದು, ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಬಂಗಾರಪೇಟೆ ಪಿಎಸ್ಐ ಭಾಸ್ಕರ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Facebook Comments