ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಬಸ್, ಇಬ್ಬರ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Accident--01

ಹಾಸನ,ಏ.13-ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚನ್ನರಾಯಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ,10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 7 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದ್ದು, ಮೃತರನ್ನು ಶಶಿಧರ್(14) ಮತ್ತು ದಯಾನಂದ್(38) ಎಂದು ತಿಳಿದುಬಂದಿದೆ.

ಸುಗಮ ಟ್ರಾವೆಲ್ಸ್‍ನ ಸ್ಲೀಪರ್ ಕೋಚ್‍ನ ಬಸ್‍ನಲ್ಲಿ ಸುಮಾರು 31 ಪ್ರಯಾಣಿಕರಿದ್ದರು. ಗಾಯಾಳುಗಳನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅದರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಮೃತ ಶಶಿಧರ್ ಬೆಂಗಳೂರಿನ ಶಾಲೆಯೊಂದರಲ್ಲಿ ದಾಖಲಾಗು ತೆರಳುತ್ತಿದ್ದ ಎಂದು ಹೇಳಲಾಗುತ್ತಿದೆ. ಈತನ ಪೋಷಕರು ಸಹ ಗಾಯಗೊಂಡಿದ್ದು , ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.  ಕ್ರೇನ್ ಬಳಸಿ ರಸ್ತೆಬದಿ ಉರುಳಿದ್ದ ಬಸ್‍ನ್ನು ಮೇಲೆತ್ತಲಾಗಿದೆ. ಅಪಘಾತದಿಂದಾಗಿ ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಹಿರಿಸಾವೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin