ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಲಾರಿ, ತಪ್ಪಿದ ಅನಾಹುತ
ತುಮಕೂರು, ಮೇ 24– ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಮಗುಚಿ ಬಿದ್ದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-48ರ ಕ್ಯಾತಸಂದ್ರ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ತುಮಕೂರಿನ ಕಡೆಯಿಂದ ಬೆಂಗಳೂರಿನ ಕಡೆಗೆ ತೆರಳುತ್ತಿದ್ದ ಲಾರಿ ಚಾಲಕ ನಿದ್ದೆ ಮಂಪರಿನಲ್ಲಿದ್ದು ತುಸು ಯಾಮಾರಿದ್ದಕ್ಕೆ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಮಗುಚಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಎದುರಿಗೆ ಬೇರೆ ವಾಹನ ಬಂದಿದ್ದರೆ ಭಾರೀ ಅನಾಹುತವೇ ಸಂಭವಿಸುತ್ತಿತ್ತು.
ಕೆಲವೇ ಕೆಲವು ಕ್ಷಣದಲ್ಲಿ ಕೆಎಸ್ಆರ್ಟಿಸಿ ಬಸ್ಸೊಂದು ಮುಂದೆ ಪಾಸಾಗಿದ್ದಕ್ಕೆ ಭಾರೀ ಅನಾಹುತ ತಪ್ಪಿದಂತಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಪತ್ರಿಕೆಗೆ ತಿಳಿಸಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸುಮಾರು 1 ಕಿ.ಮೀ ವಾಹನಗಳು ನಿಂತುಕೊಂಡಿದ್ದು, ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ನಂತರ ಕ್ರೇನ್ ಸಹಾಯದ ಮೂಲಕ ಲಾರಿಯನ್ನು ಮೇಲೆತ್ತಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS