ಚಾಲನೆ ಮಾಡುತ್ತಿದ್ದಾಗಲೇ ಬಿಎಂಟಿಸಿ ಬಸ್ ಚಾಲಕನಿಗೆ ಹೃದಯಾಘಾತ

ಈ ಸುದ್ದಿಯನ್ನು ಶೇರ್ ಮಾಡಿ

Accident

ಯಲಹಂಕ, ಆ.28- ಬಿಎಂಟಿಸಿ ಬಸ್ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದ ಪರಿಣಾಮ ಬಸ್ ಅಡ್ಡಾದಿಡ್ಡಿ ಚಲಿಸಿ ಸರಣಿ ಅಪಘಾತ ಮಾಡಿದರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.   ವಿಜಯನಗರದಿಂದ ಯಲಹಂಕ ಓಲ್ಡ್ಟೌನ್ಗೆ ಬರುತ್ತಿದ್ದ ಬಿಎಂಟಿಸಿ ಬಸ್ ಬಿಎಸ್ಎನ್ಎಲ್ ಕಚೇರಿ ಸಮೀಪ ಸಿಗ್ನಲ್ ಬಳಿ ಬರುತ್ತಿದ್ದಂತೆ ಚಾಲಕನಿಗೆ ಹೃದಯಾಘಾತವಾಗಿದ್ದು, ಆತ ಸ್ಟೇರಿಂಗ್ ಮೇಲೆ ಬಿದ್ದ ಪರಿಣಾಮ ಬಸ್ ಅಡ್ಡಾದಿಡ್ಡಿ ಚಲಿಸಿ ಮುಂದೆ ಹೋಗುತ್ತಿದ್ದ ವಾಹನಗಳಿಗೆ ಗುದ್ದಿ ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ.
ಸಿಗ್ನಲ್ ಇದ್ದ ಪರಿಣಾಮ ಬಸ್ ಮಂದಗತಿಯಲ್ಲಿ ಸಾಗುತ್ತಿದ್ದು, ವೇಗವಾಗಿ ಚಲಿಸಿದ್ದರೆ ಭಾರೀ ಅಪಘಾತವೇ ಸಂಭವಿಸುತ್ತಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಕೂಡಲೇ ಸ್ಥಳೀಯರು ಮತ್ತು ಬಸ್ ನಿರ್ವಾಹಕ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ ಮುಂದೆ ಚಲಿಸುತ್ತಿದ್ದ ವಾಹನಗಳಿಗೆ ಗುದ್ದಿದ ಪರಿಣಾಮ ಮೂರು ದ್ವಿಚಕ್ರವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಅಪಘಾತದಲ್ಲಿ ಎರಡು ಕಾರುಗಳು ಸ್ವಲ್ಪ ಜಖಂಗೊಂಡಿವೆ. ಸುದ್ದಿ ತಿಳಿಯುತ್ತಿದ್ದಂತೆ ಯಲಹಂಕ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಸಂಚಾರ ದಟ್ಟಣೆ ತಿಳಿಗೊಳಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin