ಚಿಕ್ಕಮಗಳೂರು ಕಾಫಿ ತೋಟದಲ್ಲಿ ಮರ್ಡರ್

ಈ ಸುದ್ದಿಯನ್ನು ಶೇರ್ ಮಾಡಿ

Murder--01

ಚಿಕ್ಕಮಗಳೂರು, ಜ.7-ಕಾಫಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ರೈತ ಹಾಗೂ ವಾಹನ ಚಾಲಕನ ನಡುವೆ ನಡೆದ ಜಗಳ ಒಬ್ಬರ ಕೊಲೆಯಲ್ಲಿ ಅಂತ್ಯಗೊಂಡಿದೆ. ರೈತ ಸುರೇಶ್(51) ಕೊಲೆಯಾದ ವ್ಯಕ್ತಿ. ದಾರದಹಳ್ಳಿಯ ಜೈ ಪ್ರಕಾಶ್ ಎಂಬುವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಡ್ರೈವರ್ ಸತೀಶ್ ಹಾಗೂ ರೈತನಾಗಿ ಕೆಲಸ ಮಾಡುತ್ತಿದ್ದ ಸುರೇಶ್ ನಡುವೆ ವೈಯಕ್ತಿಕ ವಿಚಾರಕ್ಕೆ ಜಗಳ ನಡೆದಿತ್ತು. ಚಾಲಕ ಸತೀಶ್, ಸುರೇಶನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಗಂಭೀರ ಗಾಯಗೊಂಡಿದ್ದ ಸುರೇಶನನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಸುರೇಶ್ ಇಂದು ಸಾವನ್ನಪ್ಪಿದ್ದಾನೆ. ಮೂಡಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕ ಸತೀಶ್‍ನನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

Facebook Comments

Sri Raghav

Admin