ಚಿಕ್ಕರಾಯಪ್ಪ, ಜಯಚಂದ್ರ ಸಸ್ಪೆಂಡ್ : ಸಿಬಿಐ ತನಿಖೆ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

Notes Jayachanda-chikkarayappa-m

ಬೆಂಗಳೂರು, ಡಿ.2-ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಿಕ್ಕರಾಯಪ್ಪ ಹಾಗೂ ರಾಜ್ಯ ರಸ್ತೆ ಯೋಜನಾ ಮುಖ್ಯಾಧಿಕಾರಿ ಜಯಚಂದ್ರ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ನಿನ್ನೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಈ ಇಬ್ಬರು ಅಧಿಕಾರಿಗಳ ಮನೆ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದಾಗ ಅಪಾರ ಪ್ರಮಾಣದ ಹಣ, ಐಷಾರಾಮಿ ಕಾರು, ದಾಖಲೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಮೇಲ್ಮನೆಯಲ್ಲಿ ಪ್ರತಿಪಕ್ಷ ಜೆಡಿಎಸ್, ಬಿಜೆಪಿ ಈ ಅಧಿಕಾರಿಗಳನ್ನು ಅಮಾನತು ಮಾಡಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ ಕಾರಣ ಸರ್ಕಾರ ಈ ಅಧಿಕಾರಿಗಳನ್ನು ತತ್‍ಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಿದೆ.

ನಿನ್ನೆ ಹಾಗೂ ಮೊನ್ನೆ ಐಟಿ ಅಧಿಕಾರಿಗಳು ದಾಳಿ ನಡೆಸಿದಾಗ ಒಟ್ಟು 6 ಕೋಟಿ ನಗದು, ಅದರಲ್ಲಿ 2000 ಮುಖಬೆಲೆಯ 4.7 ಕೋಟಿ ಮೌಲ್ಯದ ನೋಟುಗಳು ಪತ್ತೆಯಾಗಿದ್ದವು. 7ಕೆಜಿ ಚಿನ್ನದ ಗಟ್ಟಿಗಳು ದಾಳಿಯಲ್ಲಿ ಸಿಕ್ಕಿದ್ದವು. ಅಲ್ಲದೆ, ಕೋಟ್ಯಂತರ ಮೌಲ್ಯದ ಐಷಾರಾಮಿ ಕಾರುಗಳು ಪತ್ತೆಯಾಗಿದ್ದವು. 1000, 500ರೂ. ಮುಖಬೆಲೆಯ ನೋಟುಗಳನ್ನು ನಿಷೇಧ ಮಾಡಿದ ನಂತರ ಐಷಾರಾಮಿ ಕಾರುಗಳನ್ನು ಖರೀದಿ ಮಾಡಿರುವ ಬಗ್ಗೆ ದಾಖಲೆಗಳಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಅಲ್ಲದೆ, ಅಪಾರ ಪ್ರಮಾಣದ 2000 ಮುಖಬೆಲೆಯ ಹೊಸ ನೋಟುಗಳು ಪತ್ತೆಯಾಗಿರುವುದರಿಂದ ಬ್ಯಾಂಕ್ ಅಧಿಕಾರಿಗಳು ಶಾಮೀಲಾಗಿರುವ ಕಾರಣ ಸಿಬಿಐನವರು ತನಿಖೆ ಮಾಡುವ ಸಾಧ್ಯತೆ ಇದೆ. ಅಧಿಕಾರಿಗಳಿಬ್ಬರು ಹಾಗೂ ಪ್ರಕರಣದಲ್ಲಿ ಶಾಮೀಲಾಗಿರುವ ಬ್ಯಾಂಕ್ ಅಧಿಕಾರಿಗಳನ್ನು ಸಿಬಿಐ ತನಿಖೆಗೆ ಒಳಪಡಿಸಲಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin