ಚಿತ್ರದುರ್ಗದಲ್ಲಿ ಭೀಕರ ಅಪಘಾತ, 11 ಮಂದಿ ದುರ್ಮರಣ, ಹಲವರು ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ, ಮಾ.18– ಅತಿವೇಗವಾಗಿ ಬಂದ ಲಾರಿಯೊಂದು ಎರಡು ಆಟೋ ಹಾಗೂ ಟಿಟಿಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೊಳಕಾಲ್ಮೂರು ತಾಲ್ಲೂಕಿನ ರಾಮಪುರ ಗ್ರಾಮದ ಬಳಿ ಸಂಭವಿಸಿದೆ.  ಇಂದು ಬೆಳಗ್ಗೆ 11.45ರ ಸುಮಾರಿನಲ್ಲಿ ಬಳ್ಳಾರಿ ಕಡೆಯಿಂದ ಅತಿ ವೇಗವಾಗಿ ಬಂದ ಉತ್ತರ ಪ್ರದೇಶದ ಲಾರಿಯೊಂದು ನಿಯಂತ್ರಣ ತಪ್ಪಿ ಸರಣಿ ಅಪಘಾತ ಎಸಗಿದೆ. ಮೃತರೆಲ್ಲರೂ

Chitradurga--1

ಆಂಧ್ರಪ್ರದೇಶ, ಚಿತ್ರದುರ್ಗ ಜಿಲ್ಲೆಯ ನಾಗಸಮುದ್ರ ಗ್ರಾಮ ಹಾಗೂ ಶಹಪುರ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮಕ್ಕೆ ಸೇರಿದವರು  ಎಂದು ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುವ ಬೇವಿನಹಳ್ಳಿ ಗ್ರಾಮದವರು ಟಿಟಿ ಮಾಡಿಕೊಂಡು ಊರ ಹಬ್ಬಕ್ಕಾಗಿ ತೆರಳುತ್ತಿದ್ದರು ಎನ್ನಲಾಗಿದೆ.
ಮೃತಪಟ್ಟವರ ಗುರುತು ಸದ್ಯಕ್ಕೆ ಪತ್ತೆಯಾಗಿಲ್ಲ. ಅಪಘಾತದಲ್ಲಿ ಇನ್ನೂ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ ಮೂವರು ರಾಮಪುರ

Chitradurga--2

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 7 ಮಂದಿಯನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.  ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಶಾಸಕ ತಿಪ್ಪೇಸ್ವಾಮಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಅಪಘಾತ ನಂತರ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Chitradurga--3

Chitradurga--4

Facebook Comments

Sri Raghav

Admin