ಚಿತ್ರದುರ್ಗ : ಶಾಲಾ ಆವರಣದಲ್ಲಿ ಬಾಲಕಿಯೊಬ್ಬಳ ಶವ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

S-Murder

ಚಿತ್ರದುರ್ಗ, ಆ.24- ನಗರದ ಕಾವಾಡಿಗರ ಹಟ್ಟಿಯಲ್ಲಿರುವ ಸರ್ಕಾರಿ ಶಾಲೆ ಆವರಣದಲ್ಲಿ ಬಾಲಕಿಯೊಬ್ಬಳ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮೃತ ಬಾಲಕಿ ರೇಖಾ (16) ಎಂದು ತಿಳಿದುಬಂದಿದ್ದು, ಈಕೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ ಶಾಲೆಗೆ ಬಂದ ಮಕ್ಕಳು ಆವರಣದಲ್ಲಿ ಬಾಲಕಿ ಶವ ನೋಡಿ ಶಿಕ್ಷಕರಿಗೆ ತಿಳಿಸಿದ್ದಾರೆ.  ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್, ಡಿವೈಎಸ್ಪಿ ಕವಳಪ್ಪ, ಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸೇರಿದಂತೆ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕತ್ತು ಹಾಗೂ ಮೈಮೇಲೆ ಪರಚಿದ ಗಾಯಗಳಿದ್ದು, ಕತ್ತು ಹಿಸುಕಿ ಕೊಲೆ ಮಾಡಿರಬಹುದೆಂದು ಹೇಳಲಾಗುತ್ತಿದ್ದು, ಈಕೆ ಸ್ಥಳೀಯ ನಿವಾಸಿ ಎಂದು ಕೂಡ ಹೇಳಲಾಗುತ್ತಿದೆ. ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಶವ ಪರೀಕ್ಷೆ ನಂತರ ಹೆಚ್ಚಿನ ಮಾಹಿತಿ ತಿಳಿದುಬರಲಿದೆ.

Facebook Comments

Sri Raghav

Admin