ಚಿತ್ರನಟ ಸುಮನ್ ನನ್ನು ನೋಡಲು ಬಂದಿದ್ದ ಯುವಕನ ಬರ್ಬರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Murder-01

ಕೋಲಾರ,ಆ.22– ಚಿತ್ರನಟ ಸುಮನ್ನನ್ನು ನೋಡಲು ಬಂದಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಮೃತ ಯುವಕನನ್ನು ವಿನೋದ್ಕುಮಾರ್ (24) ಎಂದು ತಿಳಿದು ಬಂದಿದೆ. ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ನಟ ಸುಮನ್ನನ್ನು ನೋಡಲು ಹಲವೆಡೆಯಿಂದ ಬಂದಿದ್ದ ಅಭಿಮಾನಿಗಳ ದಂಡು ನಗರದ ಹೋಟೆಲ್ವೊಂದರಲ್ಲಿ ತಂಗಿತ್ತು.  ರಾತ್ರಿ ಪಾರ್ಟಿ ಮಾಡಿ ಕಂಠಪೂರ್ತಿ ಕುಡದಿದ್ದ ಯುವಕರು ಪರಸ್ಪರ ತಮ್ಮ ನೆಚ್ಚಿನ ನಟರ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದ ಸಂದರ್ಭದಲ್ಲಿ ಗಲಾಟೆಯಾಗಿ ಈ ಕೊಲೆ ನಡೆದಿದೆ ಎಂದು ಹೇಳಲಾಗಿದೆ.

ಘಟನೆ ನಡೆದ ನಂತರ ಎಲ್ಲರೂ ಪರಾರಿಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ವೇಮಗಲ್ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ಷಯ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

Facebook Comments

Sri Raghav

Admin