ಚಿತ್ರಮಂದಿರಗಳಲ್ಲಿ ನಿನಿಮಾ ಪ್ರದರ್ಶನಕ್ಕೂ ಮೊದಲು ರಾಷ್ಟ್ರಗೀತೆ ಕಡ್ಡಾಯ : ಸುಪ್ರೀಂ ಮಹತ್ವದ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

National-Anthem

ನವದೆಹಲಿ,ನ.30-ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ಸಾರುವ ಧ್ಯೇಯದೊಂದಿಗೆ ದೇಶದ ಎಲ್ಲ ಚಿತ್ರಮಂದಿರಗಳು ಮತ್ತು ಸಿನಿಮಾ ಹಾಲ್‍ಗಳಲ್ಲಿ ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆ ಕಡ್ಡಾಯಗೊಳಿಸಿ ಸುಪ್ರೀಂಕೋರ್ಟ್ ಇಂದು ಮಹತ್ವದ ಆದೇಶ ನೀಡಿದೆ. ರಾಷ್ಟ್ರಗೀತೆ ಬಿತ್ತರಿಸುವಾಗ ಯಾವುದೇ ಕಾರಣಕ್ಕೂ ಯಾವುದೇ ವ್ಯಕ್ತಿ ವಾಣಿಜ್ಯ ದುರ್ಲಾಭ ಪಡೆದುಕೊಳ್ಳದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ದೇಶಾದ್ಯಂತ ಎಲ್ಲ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಪ್ರಸಾರವನ್ನು ಕಡ್ಡಾಯಗೊಳಿಸಿ ಆದೇಶ ನೀಡಿದ್ದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ನ್ಯಾಯಪೀಠವು ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಪ್ರಸಾರ ಮಾಡಬೇಕು, ಭಾರತದ ತ್ರಿವರ್ಣ ರಾಷ್ಟ್ರಧ್ವಜವನ್ನು ತೆರೆ ಮೇಲೆ ಪ್ರದರ್ಶಿಸಬೇಕು. ರಾಷ್ಟ್ರಗೀತೆಗೆ ಪ್ರೇಕ್ಷಕರೆಲ್ಲರೂ ಎದ್ದು ನಿಂತು ಗೌರವ ನೀಡಬೇಕು ಎಂದು ಸೂಚನೆ ನೀಡಿದರು.

ಈ ಸಂಬಂಧ ಒಂದು ವಾರದಲ್ಲಿ ಈ ಆದೇಶವನ್ನು ಜಾರಿಗೊಳಿಸಬೇಕು ಹಾಗೂ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುತ್ತೋಲೆ ಹೊರಡಿಸಬೇಕೆಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.  ಯಾವುದೇ ಕಾರಣಕ್ಕೂ ರಾಷ್ಟ್ರಗೀತೆಯ ಅವಧಿಯನ್ನು ಕಡಿಮೆ ಮಾಡಬಾರದು ಮತ್ತು ಮೊಟಕುಗೊಳಿಸಬಾರದು, ಅಲ್ಲದೆ ರಾಷ್ಟ್ರಗೀತೆ ಪ್ರಸಾರವಾಗುವಾಗ ಯಾವುದೇ ವ್ಯಕ್ತಿಯು ವಾಣಿಜ್ಯ ಉದ್ದೇಶಕ್ಕಾಗಿ ಅದರ ದುರ್ಲಾಭ ಪಡೆಯಬಾರದು ಎಂದು ಸ್ಪಷ್ಟವಾಗಿ ಸೂಚಿಸಿದೆ.   ಅನಪೇಕ್ಷಣೀಯ ವಸ್ತುಗಳ ಮೇಲೆ ರಾಷ್ಟ್ರಗೀತೆಯನ್ನು ಮುದ್ರಿಸುವುದಾಗಲಿ ಅಥವಾ ಪ್ರದರ್ಶಿಸುವುದಾಗಲಿ ಮಾಡಬಾರದು ಎಂದು ನ್ಯಾಯಪೀಠ ಸೂಚಿಸಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin