ಚಿನ್ನಾಭರಣ ದೋಚಿದ್ದ ಕಳ್ಳರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

arrested

ಮೈಸೂರು, ನ.29-ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಉದಯಗಿರಿ ಪೊಲೀಸರು ಬಂಧಿಸಿದ್ದು, 83 ಸಾವಿರ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಉದಯಗಿರಿ ನಿವಾಸಿಗಳಾದ ಅಪ್ಪು (23) ಹಾಗೂ ಆಕಾಶ್ (19) ಬಂಧಿತ ಕಳ್ಳರು.ಕಳೆದ ಎರಡು ದಿನಗಳ ಹಿಂದೆ ಎರಡು ಮನೆಗಳಲ್ಲಿ ಕಳ್ಳತನ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಕದ್ದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಗಸ್ತಿನಲ್ಲಿದ್ದ ಪೊಲೀಸರು ಅನುಮಾನಾಸ್ಪದವಾಗಿ ಯುವಕರನ್ನು ವಿಚಾರಿಸಿದಾಗ ಸರಿಯಾದ ಮಾಹಿತಿ ನೀಡಿರಲಿಲ್ಲ.ಅನುಮಾನಗೊಂಡ ಪೊಲೀಸರು ಆರೋಪಿಗಳನ್ನು ಠಾಣೆಗೆ ಕರೆದೊಯ್ದು ಹಚ್ಚಿನ ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವ ವಿಷಯವನ್ನು ಬಾಯಿಬಿಟ್ಟಿದ್ದಾರೆ.ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin