ಚೀನಾ ಶೃಂಗಸಭೆಗೆ ಭಾರತ ಬಹಿಷ್ಕಾರ : ಸಚಿವಾಲಯದಿಂದ ಅಧಿಕೃತವಾಗಿ ಸ್ಪಷ್ಟನೆ

ಈ ಸುದ್ದಿಯನ್ನು ಶೇರ್ ಮಾಡಿ

Modi-Vs-Xi-01

ಬೀಜಿಂಗ್, ಮೇ 14-ಚೀನಾ ರಾಜಧಾನಿ ಬೀಜಿಂಗ್‍ನಲ್ಲಿ ನಾಳೆಯಿಂದ ಆರಂಭವಾಗಲಿರುವ ಒಂದು ಪಟ್ಟಿ ಒಂದು ರಸ್ತೆ (ಒಬಿಒಆರ್) ಶೃಂಗಸಭೆಗೆ ಭಾರತ ಗೈರು ಹಾಜರಿ(ಬಹಿಷ್ಕಾರ)ಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತವಾಗಿ ಪ್ರಕಟಿಸಿದೆ. ಈ ಬಗ್ಗೆ ಸಚಿವಾಲಯದ ವಕ್ತಾರ ಗೋಪಾಲ್ ಬಾಗ್ಲೆ ಕಳೆದ ರಾತ್ರಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.   ಭಾರತ ತನ್ನ ಅನುಪಸ್ಥಿತಿ ಮೂಲಕ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ನಿರ್ಮಾಣ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸುವ ಸ್ಪಷ್ಟ ಸಂದೇಶವನ್ನು ರವಾನಿಸಿದೆ.



ಚೀನಿ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರ ಉದ್ಘಾಟನಾ ಭಾಷಣದಲ್ಲಿ ಭಾರತದ ಪ್ರತಿನಿಧಿಗಳ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಭಾರತವು ಬೆಲ್ಡ್ ಅಂಡ್ ರೋಡ್ ಪೋರಂ (ಬಿಆರ್‍ಎಫ್) ಸಮಾವೇಶವನ್ನು ಪ್ರತಿನಿಧಿಸಲಿದೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯೀ ತಿಳಿಸಿದ್ದರು. ಆದರೆ ಅವರ ಹೇಳಿಕೆಗೆ ವ್ಯತಿರಿಕ್ತವಾಗಿ ಭಾರತ ಗೈರು ಹಾಜರಾಗಿ ಚೀನಾ ಮತ್ತು ಪಾಕಿಸ್ತಾನಕ್ಕೆ ಸಡ್ಡು ಹೊಡೆದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin