ಚುನಾವಣಾ ಆಯುಕ್ತರ ನೇಮಕಕ್ಕೆ ಕಾನೂನು ಏಕೆ ಇಲ್ಲ..? ಕೇಂದ್ರಕ್ಕೆ ಸುಪ್ರೀಂ ತರಾಟೆ

ಈ ಸುದ್ದಿಯನ್ನು ಶೇರ್ ಮಾಡಿ

S-Supreme-Court

ನವದೆಹಲಿ,ಜು.5-ಚುನಾವಣಾ ಆಯೋಗಕ್ಕೆ ಮುಖ್ಯ ಚುನಾವಣಾ ಆಯುಕ್ತರು(ಸಿಇಸಿ) ಮತ್ತು ಚುನಾವಣಾ ಆಯುಕ್ತರನ್ನು(ಇಸಿಗಳು) ನೇಮಕ ಮಾಡಲು ಇನ್ನೂ ಏಕೆ ಸೂಕ್ತ ಕಾನೂನನ್ನು ರೂಪಿಸಿಲ್ಲ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಇಂದು ಪ್ರಶ್ನಿಸಿದೆ. ಚುನಾವಣಾ ಆಯೋಗಕ್ಕೆ ಸಿಇಸಿ ಮತ್ತು ಇಸಿಗಳ ನೇಮಕವನ್ನು ಸಂವಿಧಾನದಡಿ ಕಡ್ಡಾಯಗೊಳಿಸಲಾಗಿದೆ. ಆದರೆ ಇದು ಸಾಧ್ಯವಾಗುವ ಕಾನೂನನ್ನು ಕೇಂದ್ರ ಸರ್ಕಾರ ಏಕೆ ಜಾರಿಗೊಳಿಸಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೆಹರ್ ಮತ್ತು ನ್ಯಾಯಮೂರ್ತಿ ಡಿ.ಚಂದ್ರಚೂಡ್ ಅವರನ್ನು ಒಳಗೊಂಡ ಪೀಠ ಪ್ರಶ್ನಿಸಿದೆ.

ಚುನಾವಣಾ ಆಯೋಗಕ್ಕೆ ನಿಷ್ಪಕ್ಷಪಾತ ಮತ್ತು ಸಮರ್ಥ ವ್ಯಕ್ತಿಯನ್ನು ನೇಮಕ ಮಾಡಬೇಕು ಎಂದು ಹೇಳಿದ ಪೀಠ ಈವರೆಗೆ ಆಯೋಗಕ್ಕೆ ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿತು. ಭಾರತ ಸಂವಿಧಾನದ ಅನುಚೇಧ 324ರ ಪ್ರಕಾರ ಮುಖ್ಯ ಚುನಾವಣಾ ಆಯುಕ್ತರುಗಳನ್ನು ನೇಮಕ ಮಾಡಬಹುದಾಗಿದೆ. ಆದರೆ ಇದಕ್ಕೆ ಸಂಬಂಧಪಟ್ಟ ಕಾನೂನು ಈವರೆಗೆ ಜಾರಿಯಾಗಿಲ್ಲ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಸಿಇಸಿ ಮತ್ತು ಇಸಿಗಳ ನೇಮಕಾತಿ ಪ್ರಕ್ರಿಯೆಯು ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿರಬೇಕು ಎಂಬುದು ಸೇರಿದಂತೆ ವಿವಿಧ ಪರಿಹಾರಗಳನ್ನು ಕೋರಿ ಅನೂಪ್ ಪರನ್‍ವಾಲ್ ಎಂಬುವರು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ಮೂಲಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆಗೊಳಪಡಿಸಿತು. ಈ ಕಾನೂನನ್ನು ಸಂಸತ್ತು ಜಾರಿಗೊಳಿಸುತ್ತದೆ ಎಂಬ ವಿಶ್ವಾಸವಿದೆ. ಒಂದು ವೇಳೆ ಸಂಸತ್ ಕಾನೂನು ರಚಿಸದಿದ್ದರೆ ನಾವೇ ರಚಿಸುತ್ತೇವೆ ಎಂದು ಪೀಠವು ಉತ್ತರಿಸಿತು. ಕೇಂದ್ರ ಸರ್ಕಾರದ ಪರವಾಗಿ ಸಾಲಿಸೆಟರ್ ಜನರಲ್ ರಂಜೀತ್‍ಕುಮಾರ್ ಪ್ರತಿನಿಧಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin