ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಪ್ರಚಾರ ಮಾಡುತ್ತಿದ್ದ ಮಹಿಳೆ ಆತ್ಮಹತೆಗೆ ಯತ್ನ

ಈ ಸುದ್ದಿಯನ್ನು ಶೇರ್ ಮಾಡಿ

Women-Suicide--01

ನೆಲಮಂಗಲ, ಜ.7-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಪ್ರಚಾರದಲ್ಲಿ ತೊಡಗಿದ್ದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಶಿವಕುಮಾರಿ ಜಿ.ಬಡ್ಡಯ್ಯ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಇತ್ತೀಚೆಗೆ ಈಕೆ ಜೆಡಿಎಸ್‍ನಿಂದ ಸ್ಪರ್ಧಿಸುವುದಾಗಿ ಹೇಳಿಕೊಳ್ಳುತ್ತಿದ್ದವಳು ನಂತರ ಯಾರ ಹಂಗೂ ಇಲ್ಲದೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಮಹಿಳೆಯರ ಪರ ಹೋರಾಟ ಮಾಡುತ್ತೇನೆ ಎಂದು ಹೇಳಿಕೊಳ್ಳುತ್ತಿದ್ದಳು. ಈಗಾಗಲೇ ಫ್ಲೆಕ್ಸ್, ಬ್ಯಾನರ್ ಹಾಕಿಕೊಂಡು ಪ್ರಚಾರದಲ್ಲೂ ತೊಡಗಿದ್ದಳು.

ಅದೇನಾಯಿತೋ ಏನೋ ತಿಳಿಯದು ನಿನ್ನೆ ರಾತ್ರಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಾಳೆ. ನಿದ್ರೆ ಮಾತ್ರೆ ಸೇವಿಸುವ ಮುನ್ನ ಪತ್ರ ಬರೆದಿಟ್ಟು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ನನಗೆ ಕಿರುಕುಳ ನೀಡುತ್ತಾರೆ. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾಳೆ. ಅಕ್ಕಪಕ್ಕದವರು ಈಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು ಪ್ರಾಣಾಪಾಯದಿಂದ ಶಿವಕುಮಾರಿ ಪಾರಾಗಿದ್ದಾಳೆ. ನೆಲಮಂಗಲ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments

Sri Raghav

Admin