ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಗೆ ನೀಡುವಂತೆ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Rajyapala--01

ಬೆಂಗಳೂರು, ಅ.31- ವಿಧಾನಸಭೆ ಮತ್ತು ಸಂಸತ್ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.  ಚುನಾವಣಾ ಪೂರ್ವದಲ್ಲಿ ಮೋದಿ ಅವರು ಭರವಸೆ ನೀಡಿದಂತೆ ಶೇ.33ರಷ್ಟು ಮೀಸಲಾತಿಯನ್ನು ಜಾರಿಗೊಳಿಸುವಂತೆ ಈ ವೇಳೆ ಒತ್ತಾಯಿಸಲಾಯಿತು.

ರಾಜಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮೀಹೆಬ್ಬಾಳ್ಕರ್, ಚುನಾವಣಾ ಪೂರ್ವದಲ್ಲಿ ಪ್ರಧಾನಿ ಮೋದಿ ಅವರು ಭಾಷಣ ಮಾಡಿದ ಕಡೆಯಲೆಲ್ಲಾ ಮಹಿಳಾ ಮೀಸಲಾತಿ ಪರವಾಗಿ ಮಾತನಾಡಿದ್ದಾರೆ. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವುದಾಗಿ ಹೇಳಿದ್ದರು. ಈಗ ಅದನ್ನು ಜ್ಞಾಪಿಸುತ್ತಿದ್ದೆವೆ ಎಂದು ಹೇಳಿದರು.

ಮರಾಠಿ ಭಾಷೆಯಲ್ಲಿ ಕರಪತ್ರ ಮುದ್ರಿಸಿ ಹಂಚಿದ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೆಳಗಾವಿ ಜಿಲ್ಲೆಯ 5 ಕ್ಷೇತ್ರದಲ್ಲಿ ಮರಾಠಿ ಹೆಚ್ಚಿದೆ. ಸುಮಾರು 5 ಲಕ್ಷದಷ್ಟು ಜನಸಂಖ್ಯೆ ಇದೆ. ಅವರಿಗೆ ಮರಾಠಿ ಭಾಷೆಯಲ್ಲಿ ಸರ್ಕಾರಿ ಯೋಜನೆಗಳ ಮಾಹಿತಿ ನೀಡುವ ಸಲುವಾಗಿ ಕರ ಪತ್ರಗಳನ್ನು ಮುದ್ರಿಸಲಾಗಿತ್ತು. ಹಿಂದಿ, ಇಂಗ್ಲಿಷ್ ಭಾಷೆಯಲ್ಲೂ ಕರಪತ್ರಗಳನ್ನು ಮುದ್ರಿಸಿ ಹಂಚಲಾಗಿದೆ. ನಾನು ಒಬ್ಬಳೇ ಅಲ್ಲ, ಸಂಸದ ಸುರೇಶ್ ಅಂಗಡಿ, ಬಿಜೆಪಿ ಶಾಸಕಿ ಶಶಿಕಲಾಜೊಲ್ಲೆ, ಸಂಜಯ್‍ಪಾಟೀಲ್ ಅವರುಗಳು ಮರಾಠಿ ಭಾಷೆಯಲ್ಲಿ ಕರ ಪತ್ರ ಮುದ್ರಿಸಿ ಹಂಚಿದ್ದಾರೆ. ನಮ್ಮ ಪಕ್ಷದ ಮುಖಂಡರೂ ಕೂಡ ಮರಾಠಿ ಭಾಷೆಯಲ್ಲಿ ಕರಪತ್ರ ಮುದ್ರಿಸಿ ಹಂಚಿದ್ದಾರೆ. ಆದರೆ, ನನ್ನೊಬ್ಬಳ ವಿಷಯವನ್ನು ವಿವಾದ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

Facebook Comments

Sri Raghav

Admin