ಚೆನ್ನೈನ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಜಯಲಲಿತಾ ಆರೋಗ್ಯ ವಿಚಾರಿಸಿದ ರಜನಿಕಾಂತ್

ಈ ಸುದ್ದಿಯನ್ನು ಶೇರ್ ಮಾಡಿ

Jayalalitha

ಚೆನ್ನೈ. ಅ.16 : ಅನಾರೋಗ್ಯದಿಂದ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ವಿಚಾರಿಸಲು ಸೂಪರ್ ಸ್ಟಾರ್ ರಜನಿಕಾಂತ್ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ್ದರು. ಸಂಜೆ 6.15 ಕ್ಕೆ ತಮ್ಮ ಪುತ್ರಿ ಐಶ್ವರ್ಯ ಜೊತೆ ಆಸ್ಪತ್ರಗೆ ಆಗಮಿಸಿದ ರಜನಿಕಾಂತ್ 25 ನಿಮಿಷಗಳ ಕಾಲ ಆಸ್ಪತ್ರೆಯಲ್ಲಿದ್ದು ಜಯಲಲಿತಾ ಆರೋಗ್ಯದ ಬಗ್ಗೆ ವಿಚಾರಿಸಿದರು.  ಅಪೋಲೋ ಆಸ್ಪತ್ರೆಯಲ್ಲಿ ವಿಐಪಿಗಳಿಗಷ್ಟೆ ಅವಕಾಶ ನೀಡಲಾಗಿದ್ದು ಸಿಎಂ ಜಯಲಲಿತಾ ವಾರ್ಡ ಗೆ ರಜನಿಕಾಂತ್ ಗೂ ಸಹ ಪ್ರವೇಶಕ್ಕೆ ಅವಕಾಶವಿರಲಿಲ್ಲ. ಈ ಹಿಂದೆ ರಾಹುಲ್ ಗಾಂಧಿ, ಉದ್ಯಮಿ ಮುಖೇಶ್ ಅಂಬಾನಿ ಪತ್ನಿ ನೀತಾ ಅಂಬಾನಿ, ಸೇರಿದಂತೆ ಹಲವು ಗಣ್ಯರು ಆಸ್ಪತ್ರಗೆ ಬೇಟಿ ನೀಡಿ ಜಯಾ ಆರೋಗ್ಯ ವಿಚಾರಿಸಿದ್ದರು.

ಜಯಲಲಿತಾ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಪೂರ್ ಗೆ ಜಯಲಲಿತಾ ಅವರನ್ನು ಸ್ಥಳಾಂತರ ಮಾಡಲಾಗುವುದು ಎನ್ನಲಾಗುತ್ತಿದೆ. ಎನೇ ಆದರೂ, ಎಷ್ಟೇ ದೊಡ್ಡ ವಿಐಪಿಗಳು ಅಪೊಲೋ ಆಸ್ಪತ್ರಗೆ ಭೇಟಿ ನೀಡಿದರೂ ಜಯಲಲಿತಾ ಆರೋಗ್ಯದ ಕುರಿತು ನಿಖರ ಹಾಗೂ ಸ್ಪಷ್ಟ ಮಾಹಿತಿಗಳು ಮಾತ್ರ ಹೊಬಿದ್ದಿಲ್ಲ.

► Follow us on –  Facebook / Twitter  / Google+

Facebook Comments

Sri Raghav

Admin