ಚೇತರಿಕೆ ಕಾಣದ ಮುಂಗಾರು, ಸದ್ಯಕ್ಕಂತೂ ಮಳೆಯಾಗುವ ಮುನ್ಸೂಚನೆಗಳಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

Rain--001

ಬೆಂಗಳೂರು, ಜು.7-ನೈರುತ್ಯ ಮುಂಗಾರು ಮಳೆಯಲ್ಲಿ ಹೆಚ್ಚಿನ ಚೇತರಿಕೆ ಕಂಡುಬರುತ್ತಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು. ಈ ಸಂಜೆಯೊಂದಿಗೆ ಮಾತನಾಡಿದ ಅವರು, ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ. ಭಾರೀ ಮಳೆಯಾಗುವ ಮುನ್ಸೂಚನೆಗಳು ಸದ್ಯಕ್ಕಂತೂ ಇಲ್ಲ. ಮಳೆ ತರುವಂತಹ ಬದಲಾವಣೆ ವಾತಾವರಣದಲ್ಲೂ ಕಂಡುಬರುತ್ತಿಲ್ಲ. ಸುಳಿಗಾಳಿ ಇಲ್ಲವೆ, ವಾಯುಭಾರ ಕುಸಿತದಂತಹ ಚಟುವಟಿಕೆಗಳು ಈ ವಾರದಲ್ಲಿ ಕಂಡುಬರುತ್ತಿಲ್ಲ.

ಕೊಡಗು, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳು ಇಲ್ಲ. ಸ್ಥಳೀಯವಾಗಿ ಸಾಧಾರಣವಾದ ಮಳೆ ರಾಜ್ಯದ ಹಲವೆಡೆ ಬೀಳುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವೆಡೆ ಮಳೆಯಾಗುತ್ತಿದ್ದರೂ ಕೃಷಿ ಚಟುವಟಿಕೆಗೆ ಅಗತ್ಯವಿರುವಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಇನ್ನು ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದ ಒಳಹರಿವು ಬರುವಂತಹ ಮಳೆಯಾಗುತ್ತಿಲ್ಲ. ಹೀಗಾಗಿ ಒಂದು ವಾರ ಕಾಲ ಮುಂಗಾರು ದುರ್ಬಲವಾಗಿಯೇ ಮುಂದುವರೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin