ಛತ್ತೀಸ್‍ಗಢದ ದಾಂತೆವಾಡ ಜಿಲ್ಲೆಯಲ್ಲಿ ನಕ್ಸಲರಿಂದ ಸ್ಫೋಟ

ಈ ಸುದ್ದಿಯನ್ನು ಶೇರ್ ಮಾಡಿ

Blast--01

ರಾಯ್ಪುರ,ಅ.30-ಛತ್ತೀಸ್‍ಗಢದ ನಕ್ಸಲ್ ಪೀಡಿತ ದಾಂತೆವಾಡ ಜಿಲ್ಲೆಯಲ್ಲಿ ಕೆಂಪು ಉಗ್ರರು ನಡೆಸಿದ ಸ್ಫೋಟದಲ್ಲಿ ಮೀಸಲು ಪಡೆಯ ಭದ್ರತಾ ಸಿಬ್ಬಂದಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.  ಮೀಸಲುಪಡೆ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ಜಿಲ್ಲೆಯ ತೇಲಮ್-ತೇಟಮ್ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ನಿನ್ನೆ ರಾತ್ರಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕಗಳು ಸಿಡಿದು ಈ ಘಟನೆ ಸಂಭವಿಸಿದೆ.

ಜಿಲ್ಲೆಯ ಲೇತಂತೇತಂ ಅರಣ್ಯದಲ್ಲಿ ನಕ್ಸಲರು ಅಡಗಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಮೀಸಲು ಪಡೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಸ್ಪೋಟ ಸಂಭವಿಸಿತು. ತಕ್ಷಣ ಯೋಧನನ್ನು ದಂತೆವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಅವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin