ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ನಕ್ಸಲರ ಎನ್‍ಕೌಂಟರ್

ಈ ಸುದ್ದಿಯನ್ನು ಶೇರ್ ಮಾಡಿ

Encounter---1

ರಾಯ್‍ಪುರ್, ಆ.13-ಛತ್ತೀಸ್‍ಗಢದ ಮಾವೋವಾದಿ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ. ಕಿಸ್ತಾರಾಂ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಜಂಟಿ ಭದ್ರತಾಪಡೆಗಳು ತೊಡಗಿದ್ದಾಗ ಈ ಗುಂಡಿನ ಚಕಮಕಿ ನಡೆಯಿತು. ಇಬ್ಬರು ಮಾವೋವಾದಿಗಳು ಹತರಾದರು. ಅವರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿಶೇಷ ಪೊಲೀಸ್ ಮಹಾ ನಿರೀಕ್ಷಕ (ಮಾವೋವಾದಿ ನಿಗ್ರಹ ಕಾರ್ಯಾಚರಣೆ) ಡಿ.ಎಂ.ಅಶ್ವಥಿ ತಿಳಿಸಿದ್ದಾರೆ.

Facebook Comments

Sri Raghav

Admin