ಛತ್ತೀಸ್ ಘಡದಲ್ಲಿ ನಕ್ಸಲರ ಅಟ್ಟಾಹಾಸ : 26 ಸಿಆರ್’ಪಿಎಫ್ ಯೋಧರು ಹುತಾತ್ಮ

ಈ ಸುದ್ದಿಯನ್ನು ಶೇರ್ ಮಾಡಿ

CRPF

ಛತ್ತೀಸ್ ಘಡ, ಏ.24: ಜತೆ ನಡೆದ ಭೀಕರ ಸಂಘರ್ಷದಲ್ಲಿ 26 ಯೋಧರು ಹುತಾತ್ಮರಾಗಿದ್ದು, 7 ಯೋಧರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯಲ್ಲಿ ಇಂದು ನಡೆದಿದೆ. ಸಿಆರ್‌ಪಿಎಫ್‌ ಯೋಧರು ಇಲ್ಲಿನ ಅರಣ್ಯದಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ನಕ್ಸಲರು ಯೋಧರ ಮೇಲೆ ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಈ ಘಟನೆಯಲ್ಲಿ ಹಲವಾರು ಪೊಲೀಸರು ಗಂಭೀರ ಗಾಯಗೊಂಡಿದ್ದರು. ಇವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ‘ಸುಮಾರು 250 ರಿಂದ 300 ಮಂದಿ ನಕ್ಸಲರು ನಮ್ಮ ಮೇಲೆ ದಾಳಿ ನಡೆಸಿದರು’ ಎಂದು ಗಾಯಗೊಂಡಿರುವ ಪೊಲೀಸರು ತಿಳಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಇದೇ ಭಾಗದಲ್ಲಿ ನಕ್ಸಲರ ಜತೆ ಸಂಘರ್ಷ ನಡೆದಿತ್ತು. ಇದರಲ್ಲಿ 24 ಪೊಲೀಸರು ಸಾವನ್ನಪ್ಪಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಸುಕ್ಮಾ ಜಿಲ್ಲೆಯಲ್ಲಿ ನಕ್ಸರ ಹಿಡಿತ ಇರುವ ಪ್ರದೇಶವಾಗಿದ್ದು ಇಲ್ಲಿ ಹಲವು ಬಾರಿ ಪೊಲೀಸರು ಮತ್ತು ನಕ್ಸಲರ ಮಧ್ಯೆ ಅನೇಕ ಸಂಘರ್ಷಗಳು ನಡೆದಿವೆ. ಸಾವನ್ನಪ್ಪಿದ ಯೋಧರು ಸಿ ಆರ್ ಪಿ ಎಫ್ ನ 74ನೇ ಬೆಟಾಲಿಯನ್ ಗೆ ಸೇರಿದವರಾಗಿದ್ದಾರೆ. ಇನ್ನೂ ಹಲವಾರು ಜನ ಜೀವನ್ಮರಣ ಹೋರಾಟದಲ್ಲಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಘಟನೆಯಲ್ಲಿ 26 ಯೋಧರು ಹುತಾತ್ಮರಾಗಿದ್ದು, 7 ಯೋಧರು ಗಾಯಗೊಂಡಿದ್ದಾರೆ ಎಂದು ಸುಕ್ಮಾದ ಉಪ ಪೊಲೀಸ್ ವರಿಷ್ಠಾಧಿಕಾರಿ ಜೀತೇಂದ್ರ ಶುಕ್ಲಾ ಖಚಿತಪಡಿಸಿದ್ದಾರೆ. ಘಟನೀಯನ್ನು ಪ್ರಧಾನಿ, ರಾಷ್ಟ್ರಪತಿ ಸೇರಿದಾಂತೆ ಅನೇಕರು ಖಂಡಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin