ಜಂತಕಲ್ ಮೈನಿಂಗ್ ಪ್ರಕರಣ : ಎಚ್‍ಡಿಕೆ ಜಾಮೀನು ಅವಧಿ ಜೂ.5ರವರೆಗೆ ವಿಸ್ತರಣೆ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy

ಬೆಂಗಳೂರು,ಮೇ 30-ಜಂತ್ಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೆ ಸೆಷನ್ ನ್ಯಾಯಾಲಯ ಜಾಮೀನು ಅವಧಿಯನ್ನು ಮುಂದಿನ ತಿಂಗಳ ಜೂ.5ರವರೆಗೆ ವಿಸ್ತರಣೆ ಮಾಡಿದೆ. ಪ್ರಕರಣದಲ್ಲಿ ಕುಮಾರಸ್ವಾಮಿ ಆರೋಪಿಯಾಗಿರುವ ಕಾರಣ, ಈ ಹಿಂದೆ ಅವರು ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈಗಾಗಲೇ ನ್ಯಾಯಾಲಯ ಎರಡು ಬಾರಿ ಅವರಿಗೆ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಿತ್ತು.ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾದಳ(ಎಸ್‍ಐಟಿ) ಬಂಧಿಸಬಹುದೆಂಬ ಕಾರಣಕ್ಕಾಗಿ ಅವರು ನ್ಯಾಯಾಲಯದಿಂದ ಅರ್ಜಿ ಪಡೆದಿದ್ದರು. ಕಳೆದ ಬಾರಿ ವಿಚಾರಣೆಗೆ ಹಾಜರಾಗಿದ್ದ ಕುಮಾರಸ್ವಾಮಿ ಪ್ರಕರಣ ಕುರಿತಂತೆ ತನಿಖಾಧಿಕಾರಿಗಳು ಮುಂದಿಟ್ಟಿದ್ದ ಎಲ್ಲ ಪ್ರಶ್ನೆಗಳಿಗೂ ಉತ್ತರಿಸಿದ್ದರು. ಹಿರಿಯ ಐಎಎಸ್ ಅಧಿಕಾರಿ ಹಾಗೂ ಕಂದಾಯ ಇಲಾಖೆ ಕಾರ್ಯದರ್ಶಿ ಗಂಗರಾಮ್ ಬಡೇರಿಯಾ ಅವರನ್ನು ಈಗಾಗಲೇ ಎಸ್‍ಐಟಿ ಬಂಧಿಸಿ ತಮ್ಮ ವಶಕ್ಕೆ ಪಡೆದಿದೆ.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗಣಿ, ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದ ಬಡೇರಿಯಾ ತಮ್ಮ ಮೇಲೆ ಅಂದಿನ ಮುಖ್ಯಮಂತ್ರಿ ಜಂತ್ಕಲ್ ಕಂಪನಿಗೆ ಗಣಿಗಾರಿಕೆ ನಡೆಸಲು ಒತ್ತಡ ಹಾಕಿದ್ದರು ಎಂದು ದೂರಿದ್ದರು.   ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಿಂ ತನಿಖೆ ನಡೆಸುವಂತೆ ಹೈಕೋರ್ಟ್‍ಗೆ ದೂರು ಸಲ್ಲಿಸಿದ್ದರು.

ಪ್ರಕರಣವನ್ನು ಹೈಕೋರ್ಟ್ ವಜಾ ಮಾಡಿದ್ದರಿಂದ ದೂರುದಾರರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇತ್ತೀಚೆಗಷ್ಟೆ ಸುಪ್ರೀಂಕೋರ್ಟ್ ಮರು ತನಿಖೆ ನಡೆಸಿ ಮೂರು ತಿಂಗಳೊಳಗೆ ವರದಿ ನೀಡಬೇಕೆಂದು ಎಸ್‍ಐಟಿಗೆ ಸೂಚನೆ ಕೊಟ್ಟಿತ್ತು. ಸುಪ್ರೀಂಕೋರ್ಟ್ ನಿರ್ದೇಶನದಂತೆ ಎಸ್‍ಐಟಿ ತನಿಖೆ ಆರಂಭಿಸಿದ ಬೆನ್ನಲ್ಲೇ ಗಂಗಾರಾಮ್ ಬಡೇರಿಯಾ ಅವರನ್ನು ಬಂಧಿಸಿದ್ದರು. ಈ ಪ್ರಕರಣ ರಾಜಕೀಯ ಜಟಾಪಟಿಗೂ ಕಾರಣವಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin