ಜಂತಕಲ್ ಮೈನಿಂಗ್ ಪ್ರಕರಣ : ಹೆಚ್ಡಿಕೆ ಕೋರ್ಟ್‍ಗೆ ಜನಾರ್ದನ್ ರೆಡ್ಡಿ ದಾಖಲೆ, ಸಿಡಿ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Janardhan-Reddy--01

ವಿಜಯಪುರ, ಜೂ.6– ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಿದೆ ಎನ್ನಲಾದ ಜಂತಕಲ್ ಮೈನಿಂಗ್ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಇಂದು ಕೋರ್ಟ್‍ಗೆ ದಾಖಲೆ, ಸಿಡಿ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಜನಾರ್ದನ್ ರೆಡ್ಡಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ಸಂಬಂಧ ನಾನು ಮಾಡಿರುವ ಆರೋಪಗಳ ಬಗ್ಗೆ ಕೋರ್ಟ್‍ಗೆ ದಾಖಲೆ ನೀಡುತ್ತೇನೆ. ದಾಖಲೆಗಳನ್ನು ನೀಡಿದ ಬಳಿಕ ಎಸ್‍ಐಟಿ ಅಧಿಕಾರಿಗಳು ಮುಂದಿನ ತನಿಖೆ ಕೈಗೊಳ್ಳುತ್ತಾರೆ ಎಂದು ಹೇಳಿದರು.ನಾನು ನ್ಯಾಯವಾಗಿ ನಡೆದುಕೊಂಡಿದ್ದರೂ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದರು. ಎಲ್ಲ ಪ್ರಕರಣಗಳಲ್ಲೂ ನನಗೆ ನ್ಯಾಯ ಸಿಕ್ಕಿದೆ. ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದರು.  ನಾನು ಸದ್ಯ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಯಾವುದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸ್ಪಷ್ಟ ಬಹುಮತ ಬರಲಿದ್ದು, ಬಿ.ಎಸ್.ಯಡಿಯೂರಪ್ಪ ಅವರೇ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin