ಜನಪ್ರತಿನಿಧಿಗಳು- ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯ

ಈ ಸುದ್ದಿಯನ್ನು ಶೇರ್ ಮಾಡಿ

t--narasipura

ಟಿ.ನರಸೀಪುರ, ಆ.19-ಅಧಿಕಾರಿಗಳು ಚುನಾಯಿತಿ ಪ್ರತಿನಿಧಿಗಳನ್ನು ವಿಶ್ವಾಸಕ್ಕ ತೆಗೆದುಕೊಂಡು ಕಾರ್ಯ ನಿರ್ವಹಿಸುವಂತೆ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಸ್.ರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.ಪಟ್ಟಣದ ತಾ.ಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಅಧಿಕಾರಿಗಳು ಚುನಾಯಿತಿ ಪ್ರತಿನಿಧಿಗಳೊಂದಿಗೆ ಸಮನ್ವಯತೆ ಕಾಯ್ದುಕೊಳ್ಳಬೇಕು, ಜನಪ್ರತಿನಿಧಿಗಳು ತಮ್ಮ ಇಲಾಖೆ ಬಂದು ಮಾಹಿತಿ ಕೇಳಿದಾಗ ಅವರಿಗೆ ಬೇಕಾದ ಮಾಹಿತಿಯನ್ನು ನೀಡಬೇಕು, ಜನಪ್ರತಿನಿಧಿಗಳು ಸಹ ಅಧಿಕಾರಿಗಳೊಂದಿಗೆ ಪ್ರೀತಿ ಸ್ನೇಹದೊಂದಿಗೆ ತಮಗೆ ಬೇಕಾದ ಮಾಹಿತಿ ಪಡೆದುಕೊಂಡು ಸಾರ್ವಜನಿಕರಿಗೆ ಅನೂಕೂಲ ಮಾಡಿಕೊಡಬೇಕೆಂದು ಸಲಹೆ ನೀಡಿದರು.

ಕೃಷಿ ಅಧಿಕಾರಿ ಕೃಷ್ಣಮೂರ್ತಿ ಅವರಿಂದ ಮಾಹಿತಿ ಪಡೆಯುತ್ತಿದ್ದ ಸಂದರ್ಭ ಮಧ್ಯ ಪ್ರವೇಶಿಸಿ ಮಾತನಾಡಿದ ತಾ.ಪಂ ಸದಸ್ಯ ರಮೇಶ್ ಕೃಷಿ ಇಲಾಖೆ ಅಧಿಕಾರಿ ಮಧ್ಯವರ್ತಿಗಳ ಜೊತೆ ಶಾಮೀಲಾಗಿರುವುದರಿಂದ ಅರ್ಹ ಫಲಾನು ಭವಿಗಳಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳು ಸಿಗುತ್ತಿಲ್ಲ ಬದಲಿಗೆ ಲಂಚ ನೀಡಿದವರಿಗೆ ಅಧಿಕಾರಿ ಯಂತ್ರೋಪರಣ ನೀಡುತ್ತಿದ್ದಾರೆ, ನಾನು ಸವಲತ್ತುಗಳ ಬಗ್ಗೆ ಮಾಹಿತಿ ಕೇಳಲು ಕಛೇರಿಗೆ ತೆರಳಿದಾಗ ಅಧಿಕಾರಿ ನನ್ನನ್ನು ಏಕವಚನದಲ್ಲಿ ಹೊರಗಡೆ ಇರಿ ಎಂದು ಹೇಳಿ ಚುನಾಯಿತಿ ಪ್ರತಿನಿಧಿಯನ್ನು ಅಗೌರವದಿಂದ ನಡೆಸಿಕೊಂಡ ಇವರು ಸಾಮಾನ್ಯ ರೈತರನ್ನು ಇನ್ಯಾವ ಪರಿ ಕಾಣ ಬಹುದು ಎಂದು ಬೇಸರ ವ್ಯಕ್ತಪಡಿಸಿ, ಈ ಅಧಿಕಾರಿಯ ಮೇಲೆ ಸೂಕ್ತ ಕ್ರಮ ವಹಿಸುವಂತೆ ಸಭೆಯಲ್ಲಿ ತಿಳಿಸಿದರು.

ಇದನ್ನು ತಾಲ್ಮೆಯಿಂದಲೇ ಆಲಿಸಿದ ರಾಮಯ್ಯರವರು ಇಲಾಖೆಯಿಂದ ವಿತರಿಸುವ ಸವಲತ್ತುಗಳನ್ನು ಅರ್ಹಫಲಾನುಭವಿಗಳಿಗೆ ಜನಪ್ರತಿನಿಧಿಗಳ ಸಮ್ಮುಖದಲ್ಲಿ ವಿತರಣೆ ಮಾಡಿ, ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಅಧಿಕಾರಿಗೆ ಸೂಚಿಸಿದರು.ಈ ಬಾರಿಯ ಎಸ್‍ಎಸ್‍ಎಲ್‍ಸಿ ಫಲಿತಾಂಶ ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಉತ್ತಮವಾಗಿದ್ದು, ಜಿಲ್ಲೆಯಲ್ಲಿ ತಾಲ್ಲೂಕು 5 ನೇ ಸ್ಥಾನ ಪಡೆದುಕೊಂಡಿದೆ ಎಂದು ಬಿಇಓ ಮರಿಸ್ವಾಮಿ ಸಭೆಯಲ್ಲಿ ಮಾಹಿತಿ ನೀಡಿದರು. ವರುಣಾ ಕೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಿಸಿಕೊಳ್ಳಲು ನರೇಗಾ ಯೋಜನೆಯಲ್ಲಿ ಅವಕಾಶವಿದ್ದು, ಇದನ್ನು ಸದುಪಡಿಸಿಕೊಳ್ಳಬೇಕು. ಮೂಲ ಸೌಕರ್ಯ ಹಾಗೂ ಪಿಠೋಪಕರಣಗಳು ಕೊರತೆ ಇರುವ ಶಾಲೆಯನ್ನು ಗುರುತಿಸಿ ಮಾಹಿತಿ ನೀಡಿ, ಎಂದು ಸೂಚಿಸಿದರು.

ತಾಲ್ಲೂಕಿನ ಆಸ್ಪತ್ರೆಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು, ವೈದ್ಯರು ನಿಗದಿತ ಸಮಯಕ್ಕೆ ಹಾಜರಾಗಿ, ಕರ್ತವ್ಯ ನಿರ್ವಹಿಸಬೇಕು, ರೋಗಿಗಳಿಗೆ ಉಚಿತ ಔಷಧಿಗಳನ್ನು ಸಮರ್ಪಕ ವಿತರಣೆ ಮಾಡಿ ಆಸ್ಪತ್ರೆಗೆ ಬೇಕಾದ ಮೂಲ ಸೌಕರ್ಯಗಳ ಬಗ್ಗೆ ಗಮನಹರಿಸುವಂತೆ ತಾಲ್ಲೂಕು ಆರೋಗ್ಯಾಧಿಕಾರಿ ಶ್ರೀನಿವಾಸ್‍ಗೆ ಸೂಚಿಸಿದರು.ಸಭೆಯಲ್ಲಿ ತಹಸೀಲ್ದಾರ್.ಬಿ.ಶಂಕರಯ್ಯ, ಇಓ ರಾಜು, ಕಬಿನಿ ಎಇಇ ವರದರಾಜು, ಸಿಡಿಪಿಓ ಬಸವರಾಜು, ಚೆಸ್ಕಾಂ ಎಇಇ ಶಂಕರ್, ಪುರಸಭೆ ಮುಖ್ಯಾಧಿಕಾರಿ ವಿ.ಟಿ.ವಿಲ್ಸನ್ ಸೇರಿದಂತೆ ವಿವಿಧ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin