ಜಮೀನಿನಲ್ಲಿ ಟ್ರ್ಯಾಕ್ಟರ್ ಮಗುಚಿ ರೈತ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

kr--pete

ಕೆಆರ್ ಪೇಟೆ, ಆ.23- ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ಆಕಸ್ಮಿಕವಾಗಿ ಮಗುಚಿ ಬಿದ್ದ ಪರಿಣಾಮ ಜಮೀನಿನಲ್ಲಿ ಕಳೆ ತೆಗೆಯುತ್ತಿದ್ದ ರೈತನಿಗೆ ಡಿಕ್ಕಿ ಹೊಡೆದ ಪರಿಣಾಮ ರೈತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಹತ್ತಿಮರುವನಹಳ್ಳಿ ಗ್ರಾಮದ ಬಳಿ ನಡೆದಿದೆ.ತಾಲೂಕಿನ ಶೀಳನೆರೆ ಹೋಬಳಿಯ ಕೋಡಿಹಳ್ಳಿ ಗ್ರಾಮದ ನರಸಿಂಹೇಗೌಡ ಎಂಬುವರ ಮಗ ಜಗದೀಶ್(34) ಮೃತಪಟ್ಟ ರೈತ.
ಘಟನೆ ವಿವರ:

ತಮ್ಮ ಸಂಬಂಧಿ ಹತ್ತಿಮರುವನಹಳ್ಳಿ ಗ್ರಾಮದ ಶಿವರಾಜ್ ಎಂಬುವವರಿಗೆ ಕೃಷಿ ಕಾರ್ಯದಲ್ಲಿ ನೆರವು ನೀಡಲು ಬಂದಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.ಮೃತ ರೈತನಿಗೆ ಪತ್ನಿ ಸೌಮ್ಯ, ಇಬ್ಬರು ಪುತ್ರರಿದ್ದಾರೆ. ಘಟನಾ ಸ್ಥಳಕ್ಕೆ ಪಟ್ಟಣ ಪೊಲೀಸ್ ಠಾಣೆ ಸಬ್‍ಇನ್ಸ್‍ಪೆಕ್ಟರ್ ಅರುಣ್‍ಕುಮಾರ್, ಶಾಸಕ ಕೆ.ಸಿ.ನಾರಾಯಣಗೌಡ, ಜಿಪಂ ಸದಸ್ಯ ಎಚ್.ಟಿ.ಮಂಜು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin