ಜಮ್ಮು-ಕಾಶ್ಮೀರದ ಶೋಪಿಯಾನ್‍ನಲ್ಲಿ ಉಗ್ರರ ದಾಳಿಗೆ ಮೂವರು ಯೋಧರು ಹುತಾತ್ಮ

ಈ ಸುದ್ದಿಯನ್ನು ಶೇರ್ ಮಾಡಿ

Firing--01

ಶ್ರೀನಗರ, ಫೆ.23-ಕಾಶ್ಮೀರ ಕಣಿವೆಯಲ್ಲಿ ಪಾಕಿಸ್ತಾನಿ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‍ನಲ್ಲಿ ಸೇನಾ ಗಸ್ತು ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, 8 ಸೈನಿಕರು ತೀವ್ರ ಗಾಯಗೊಂಡಿದ್ದಾರೆ. ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಮಹಿಳೆ ಸಹ ಮೃತಪಟ್ಟಿದ್ದಾರೆ.
ಈ ಕೃತ್ಯದೊಂದಿಗೆ ಕಳೆದ ಎರಡು ತಿಂಗಳ ಅವಧಿಯಲ್ಲಿ ಕಾಶ್ಮೀರದಲ್ಲಿ ರಮರಣವನ್ನಪ್ಪಿದ ಯೋಧರ ಸಂಖ್ಯೆ 31ಕ್ಕೇರಿದೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆ ಚಿತ್ತಾರ್‍ಗಮ್ ಪ್ರದೇಶದಲ್ಲಿ ಭಯೋತ್ಪಾದಕರಿಗಾಗಿ ಶೋಧ ನಡೆಸಿ ಭದ್ರತಾ ಪಡೆ ಗಸ್ತು ವಾಹನ ಇಂದು ಮುಂಜಾನೆ ಹಿಂದುರುಗುತ್ತಿತ್ತು. ಇದೇ ಸಂದರ್ಭದಲ್ಲಿ ರಸ್ತೆಯ ಪಕ್ಕದಲ್ಲಿ ಅಡಗಿದ್ದ ಉಗ್ರರು ಸೇನಾ ವಾಹನವನ್ನು ಗುರಿಯಾಗಿರಿಸಿಕೊಂಡು ಹಠಾತ್ ದಾಳಿ ನಡೆಸಿದರು.

ಈ ಕುತಂತ್ರದ ಆಕ್ರಮಣದಲ್ಲಿ ಐವರು ಯೋಧರು ಹುತಾತ್ಮರಾದರು. ಸೇನಾ ಸಿಬ್ಬಂದಿ ಪ್ರತಿದಾಳಿ ನಡೆಸಿದಾಗ ಗುಂಡಿನ ಚಕಮಕಿ ನಡೆಯಿತು.   ಎನ್‍ಕೌಂಟರ್‍ನಲ್ಲಿ ಹಾರಿದ ಗುಂಡಿನಿಂದಾಗಿ ಜಾನಾ ಬೇಗಂ ಎಂಬ ಮಹಿಳೆ ಸಹ ಮೃತಪಟ್ಟು, ಇತರ ಎಂಟು ಯೋಧರು ತೀವ್ರ ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.   ಯೋಧರು ಪ್ರತಿದಾಳಿಯನ್ನು ತೀವ್ರಗೊಳಿಸಿದಾಗ ಉಗ್ರರು ಕತ್ತಲಲ್ಲಿ ಕಣ್ಮರೆಯಾಗಿದ್ದು, ಕೆಲವರು ತೀವ್ರ ಗಾಯಗೊಂಡಿರುವ ಸಾಧ್ಯತೆ ಇದೆ. ಪರಾರಿಯಾಗಿರುವ ಉಗ್ರರಿಗಾಗಿ ಈ ಪ್ರದೇಶದಲ್ಲಿ ವ್ಯಾಪಕ ಶೋಧ ಮುಂದುವರಿದಿದೆ.  ಲಷ್ಕರ್-ಎ-ತೊಯ್ಬಾ ಉಗ್ರರು ಈ ಕೃತ್ಯ ಎಸಗಿರಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin