ಜಯಲಲಿತಾಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಈ ಸುದ್ದಿಯನ್ನು ಶೇರ್ ಮಾಡಿ

S-Jayalalitha

ನವದೆಹಲಿ, ಆ.24– ಮಾನನಷ್ಟ ಪ್ರಕರಣಗಳಿಗೆ ಸಂಬಂಧಪಟ್ಟಂತೆ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಛೀಮಾರಿ ಹಾಕಿರುವ ಸುಪ್ರೀಂಕೋರ್ಟ್, ನೀವು ಸಾರ್ವಜನಿಕರ ಗಣ್ಯ ವ್ಯಕ್ತಿ, ಟೀಕೆಗಳನ್ನು ಎದುರಿಸಬೇಕು ಎಂದು ತಿಳಿಸಿದೆ. ಅಲ್ಲದೇ ತಮಿಳುನಾಡು ಸರ್ಕಾರ ಆಡಳಿತಯಂತ್ರವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ತಮಿಳುನಾಡು ಮುಖ್ಯಮಂತ್ರಿ ಹೂಡಿದ್ದ ಮಾನನಷ್ಟ ಮೊಕದ್ದಮೆಗಳ ಕುರಿತು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸಾರ್ವಜನಿಕ ಗಣ್ಯ ವ್ಯಕ್ತಿ ಟೀಕೆಗಳನ್ನು ಎದುರಿಸಲು ಸಿದ್ಧವಾಗಿರಬೇಕೆಂದು ತಿಳಿಸಿದೆ.  ಮುಖ್ಯಮಂತ್ರಿ ಮತ್ತು ಅಣ್ಣಾಡಿಎಂಕೆ ಅಧಿನಾಯಕಿ ವಿರುದ್ಧ ಮಾಡಿರುವ ಟೀಕೆಗಳ ವಿರುದ್ಧ ತಮಿಳುನಾಡು ಸರ್ಕಾರ ಹಲವಾರು ಮಾನನಷ್ಟ ಮೊಕದ್ದಮೆಗಳನ್ನು ಸುಪ್ರೀಂಕೋರ್ಟ್ನಲ್ಲಿ ಹೂಡಿತ್ತು.

ಇವುಗಳ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ನ ವಿಭಾಗೀಯ ಪೀಠವೊಂದು ನೀವು ಸಾರ್ವಜನಿಕ ಗಣ್ಯ ವ್ಯಕ್ತಿ ಹಾಗೂ ಟೀಕೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದೆ. ತಮಿಳುನಾಡು ಸರ್ಕಾರದ ರೀತಿ ಬೇರೆ ಯಾವ ರಾಜ್ಯವೂ ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಂಡಿಲ್ಲ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಯಲಲಿತಾ ಅವರಿಗೆ ಛೀಮಾರಿ ಹಾಕುತ್ತಿರುವುದು ಇದು ಎರಡನೇ ಬಾರಿ.

► Follow us on –  Facebook / Twitter  / Google+

Facebook Comments

Sri Raghav

Admin