ಜಯಲಲಿತಾ ಆರೋಗ್ಯದ ಕುರಿತು ಸುಳ್ಳು ಸುದ್ದಿ ಹರಡಿಸಿದ ಇಬ್ಬರು ಅರೆಸ್ಟ್ , 43 ಪ್ರಕರಣ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

Jayalalithaa

ಚೆನ್ನೈ, ಅ.12- ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿ ಜೆ. ಜಯಲಲಿತಾ ಆರೋಗ್ಯದ ಕುರಿತಂತೆ ಸುಳ್ಳು ಸುದ್ದಿ ಹರಡಿಸಿದ ಆರೋಪದಡಿ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದ್ದು 43 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಮಿಳುನಾಡು ಪೊಲೀಸರು ತಿಳಿಸಿದ್ದಾರೆ. ಇದರ ಜೊತೆಗೆ ಜಯಲಲಿತಾ ಆರೋಗ್ಯದ ಕುರಿತಂತೆ ಗಾಳಿಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಸುಳ್ಳು ಮತ್ತು ದುರುದ್ದೇಶಪೂರಿತ ವಿಷಯಗಳನ್ನು ಹಬ್ಬಿಸುವವರ ಶಿಕ್ಷೆಗೆ ಒಳಗಾಗಲಿದ್ದಾರೆ. ಇಂತಹ ಪ್ರಕರಣಗಳಿಗೆ 7 ವರ್ಷಗಳವರೆಗೂ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಗಾಗಲೇ ಸುಳ್ಳು ಸುದ್ದಿ ಆರೋಪದಡಿ ನಮಕ್ಕಲ್  ಹಾಗೂ ಮಧುರೈ ಜಿಲ್ಲೆಯ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಯಲಲಿತಾ ಅವರಿಗೆ ತೀವ್ರ ಜ್ವರ ಹಾಗೂ ನಿರ್ಜಲೀಕರಣ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಸೆಪ್ಟಂಬರ್ 22 ರಂದು ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin