ಜಯಲಲಿತಾ ಸಾವಿನ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯ : ಲೋಕಸಭೆಯಲ್ಲಿ ಗದ್ದಲ, ಸಭಾತ್ಯಾಗ

ಈ ಸುದ್ದಿಯನ್ನು ಶೇರ್ ಮಾಡಿ

Jayalalithaa-021

ನವದೆಹಲಿ, ಮಾ.10– ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ದಿ.ಜಯಲಲಿತಾ ಅವರ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಎಐಎಡಿಎಂಕೆ ಕಾರ್ಯಕರ್ತರು ಇಂದು ಲೋಕಸಭೆಯಲ್ಲಿ ಭಾರೀ ಗದ್ದಲ ಉಂಟುಮಾಡಿದ್ದರಿಂದ ಕಲಾಪವನ್ನು ಕೆಲಕಾಲ ಮುಂದೂಡಿದ ಪ್ರಸಂಗ ನಡೆಯಿತು.  ಇಂದು ಸದನ ಸಮಾವೇಶಗೊಳ್ಳುತ್ತಿದ್ದಂತೆ ಎಐಎಡಿಎಂಕೆಯ ಆರು ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದಿನ ಸ್ಥಳಕ್ಕೆ ದಾವಿಸಿ ತಮ್ಮ ಪಕ್ಷದ ನಾಯಕಿ ಜಯಲಲಿತಾ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಜಯಾರ ಭಾವಚಿತ್ರವಿರುವ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಘೋಷಣೆ ಕೂಗಿ ಗದ್ದಲ ಸೃಷ್ಟಿಸಿದರು.

ಸದಸ್ಯರಲ್ಲಿ ಕೆಲವರು ವಿ.ಕೆ.ಶಶಿಕಲಾ ಪರವಾಗಿ ಮತ್ತು ಇನ್ನೂ ಕೆಲವರು ಮಾಜಿ ಮುಖ್ಯಮಂತ್ರಿ ಒ.ಪನ್ನೀರ್‍ಸೆಲ್ವಂ ಪರವಾಗಿ ಬೆಂಬಲ ಸೂಚಿಸಿದರು.   ಪ್ರಶ್ನೋತ್ತರ ಕಲಾಪ ನಡೆಯುತ್ತಿರುವಾಗಲೇ ಉಂಟಾದ ಕೋಲಾಹಲದ ವಾತಾವರಣದಿಂದ ಸ್ಪೀಕರ್ ಸುಮಿತ್ರ ಮಹಾಜನ್ ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದರು.  ಮತ್ತೆ ಸದನ ಸಮಾವೇಶಗೊಂಡಾಗ ಈ ವಿಷಯದ ಬಗ್ಗೆ ಚರ್ಚಿಸಲು ನಿಲುವಳಿ ಸೂಚನೆಗೆ ಒತ್ತಾಯಿಸಿ ಘೋಷಣೆ ಕೂಗುತ್ತ ಎಐಎಡಿಎಂಕೆ ಸದಸ್ಯರು ಸಭಾತ್ಯಾಗ ಮಾಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin