ಜಯಲಲಿತಾ ಸಾವಿನ ಸುತ್ತ ಅನುಮಾನದ ಹುತ್ತ : ಗೌತಮಿಗೆ ಗುಮಾನಿ, ಸತ್ಯಾಂಶಕ್ಕಾಗಿ ಪ್ರಧಾನಿಗೆ ಪತ್ರ

ಈ ಸುದ್ದಿಯನ್ನು ಶೇರ್ ಮಾಡಿ

Jayalalithaa-01

ಚೆನ್ನೈ, ಡಿ.9-ತಮಿಳುನಾಡಿನ ಬಡವರ ಆರಾಧ್ಯದೇವತೆ, ಪುರುಚ್ಚಿ ತಲೈವಿ ಜಯಲಲಿತಾ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಚತುರ್ಭಾಷಾ ತಾರೆ ಗೌತಮಿ, ಈ ಬಗ್ಗೆ ಸತ್ಯಾಂಶವನ್ನು ಬಹಿರಂಗಗೊಳಿಸಬೇಕೆಂದು ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಜಯಲಲಿತಾರ ಸಾವಿನ ಹಿಂದೆ ಅನೇಕ ಅನುಮಾನಗಳು ಮತ್ತು ಸಂಶಯಗಳ ಹೊಗೆಯಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ನೀಡಲಾಗುತ್ತಿದ್ದ ಚಿಕಿತ್ಸೆ, ಅವರ ಚಿಕಿತ್ಸೆ ವೇಳೆ ಅವರ ದೇಹಸ್ಥಿತಿ ಮತ್ತಿತರ ವಿವರಗಳ ಬಗ್ಗೆ ಜನರಿಗೆ ಸತ್ಯಾಂಶ ತಿಳಿಯಬೇಕಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸತ್ಯವನ್ನು ಬಹಿರಂಗಗೊಳಿಸಬೇಕೆಂದು ಗೌತಮಿ ಪತ್ರದಲ್ಲಿ ಮನವಿ ಮಾಡಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin