ಜಲ್ಲಿಕಟ್ಟು ಅನುಮತಿಗೆ ಆಗ್ರಹಿಸಿ ಭಾರೀ ಪ್ರತಿಭಟನೆ, ಮದುರೈನಲ್ಲಿ ಸುಪ್ರೀಂ ಆದೇಶ ಧಿಕ್ಕರಿಸಿ ನಡೆದ ಸಾಹಸ ಕ್ರೀಡೆ

ಈ ಸುದ್ದಿಯನ್ನು ಶೇರ್ ಮಾಡಿ

Jellikattu-Madurai

ನವದೆಹಲಿ, ಜ.13- ಪೊಂಗಲ್ ಹಬ್ಬದಂದು ನಡೆಯುವ ಜಲ್ಲಿಕಟ್ಟು (ಹೋರಿ ಪಳಗಿಸುವ ಸ್ಪರ್ಧೆ) ಜನಪ್ರಿಯ ಸಾಹಸ ಕ್ರೀಡೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ತಮಿಳುನಾಡಿನ ವಿವಿಧೆಡೆ ಇಂದು ಪ್ರತಿಭಟನೆ ನಡೆದವು. ಚೆನ್ನೈನ ಮರೀನಾ ಬೀಚ್ ಬಳಿ ನೂರಾರು ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ ಜಲ್ಲಿಕಟ್ಟು ಕ್ರೀಡೆಗೆ ಅವಕಾಶ ನೀಡಬೇಕು. ಈ ಸಂಬಂಧ ಕೂಡಲೇ ಸುಗ್ರೀವಾಜ್ಞೆ ಹೊರಡಿಸಬೇಕೆಂದು ಒತ್ತಾಯಿಸಿದರು. ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಚೆನ್ನೈನಲ್ಲಿ ಇಂದು ಸರ್ಕಾರಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಯಿತು.
ತಮಿಳುನಾಡಿನ ಮಧುರೈ ಸೇರಿದಂತೆ ವಿವಿಧ ಜಿಲ್ಲೆಗಳಲ್ಲೂ ಜಲ್ಲಿಕಟ್ಟು ಕ್ರೀಡೆಗೆ ಅವಕಾಶ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Jellikattu

ಮಧುರೈ ಜಿಲ್ಲೆಯ ಕೆಲವು ಹಳ್ಳಿಗಳಲ್ಲಿ ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘಿಸಿ ಜಲ್ಲಿಕಟ್ಟು ಕ್ರೀಡೆ ನಡೆದ ವರದಿಗಳಿವೆ  ನಿಷೇಧಿತ ಜಲ್ಲಿಕಟ್ಟು (ಹೋರಿ ಬೆದರಿಸುವ) ಕ್ರೀಡೆ ಕುರಿತು ಸಂಕ್ರಾಂತಿ ಹಬ್ಬದ ಒಳಗೆ ತಾನು ತೀರ್ಪು ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನಿನ್ನೆ ಹೇಳುವ ಮೂಲಕ ಪೊಂಗಲ್ ದಿನದಂದು ಈ ಸ್ಪರ್ಧೆ ನಡೆಸುವುದು ಅಕ್ರಮ ಮತ್ತು ಕಾನೂನು ಬಾಹಿರ ಎನ್ನುವುದನ್ನು ಸೂಚ್ಯವಾಗಿ ತಿಳಿಸಿದೆ. ಇದರಿಂದಾಗಿ ತಮಿಳುನಾಡು ಸರ್ಕಾರಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ ಮತ್ತು ಜಲ್ಲಿಕಟ್ಟು ಸ್ಪರ್ಧಿಗಳ ಆಸೆಗೆ ತಣ್ಣೀರೆರಚಿದಂತಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin